ಏಡ್ಸ್ ಅರಿವಿನಿಂದ ಸಮಾಜದ ಸ್ವಾಸ್ಥೃ ಕಾಪಾಡುವ ಕೆಲಸ

13-GPT-1
Published on

ಗುಂಡ್ಲುಪೇಟೆ: ಆರೋಗ್ಯ ಇಲಾಖೆ ಏಡ್ಸ್ ಬಗ್ಗೆ ಅರಿವು ಮೂಡಿಸುವ ಮೂಲಕ ಸಮಾಜದ ಸ್ವಾಸ್ಥೃ ಕಾಪಾಡುತ್ತಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಏಡ್ಸ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಎಚ್‌ಐವಿ ಮತ್ತು ಏಡ್ಸ್ ಎರಡೂ ಬೇರೆ ಬೇರೆಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಅಲೀಂ ಪಾಷಾ ಮಾತನಾಡಿ, ಆರೋಗ್ಯ ಇಲಾಖೆಯು ಮಾಧ್ಯಮ, ಬೀದಿ ನಾಟಕ, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಮೂಲಕ ಎಚ್‌ಐವಿ ಮತ್ತು ಏಡ್ಸ್ ವ್ಯಾಪಿಸುವುದನ್ನು ತಡೆಗಟ್ಟಲಾಗುತ್ತಿದೆ. ಅಲ್ಲದೆ ಇದರಿಂದಾಗುತ್ತಿರುವ ಸಾವು-ನೋವುಗಳನ್ನು ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದರು.

ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಜೆ.ಜೆ.ಶಿವಕುಮಾರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net