ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ald crime
Published on

ಆಲ್ದೂರು: ಕೂದುವಳ್ಳಿ ಗ್ರಾಮದ ಕೃಷಿಕ ಹೂವೇಗೌಡ (52) ಶನಿವಾರ ಬೆಳಗ್ಗೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟರು.

ತೋಟದಲ್ಲಿ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿಗೆ ಏಣಿ ತಗುಲಿದ್ದರಿಂದ ಮೃತಪಟ್ಟರು. ಇತ್ತೀಚೆಗಷ್ಟೇ ಹೂವೇಗೌಡ ಅವರ ಮಗ ಟ್ರಾೃಕ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದರು. ಹೂವೇಗೌಡ ಅವರ ಸಾವು ಕುಟುಂಬಕ್ಕೆ ಸಿಡಿಲು ಬಡಿದಂತಾಗಿದೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net