ಏಮ್ಸ್ ಹೋರಾಟಕ್ಕೆ ಬೆಂಬಲ

11 YERRISWAMY 02
Published on

ಬಳ್ಳಾರಿ : ಏಮ್ಸ್ ಸಂಸ್ಥೆಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿ, ಕ.ಕ. ಜಿಲ್ಲೆಗಳಲ್ಲಿ ಜು. 16 ರಂದು ನಡೆಯುವ ಪ್ರತಿಭಟನೆಗೆ ಜಿಲ್ಲಾ ಹೈದರಬಾದ್ ಕರ್ನಾಟಕ ಹೋರಾಟ ಸಮಿತಿ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇಲ್ಲಿನ ಗಾಂಧಿಭವನದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಆಶೋಕ ಕುಮಾರ ಜೈನ್ ಮಾತನಾಡಿ, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದೇ ರಾಯಚೂರು ಜಿಲ್ಲೆ ಎಲ್ಲ ರಂಗಗಳಲ್ಲಿ ಎಲ್ಲ ಇದ್ದು ಇಲ್ಲದಂತಾಗಿದೆ. ಆರೋಗ್ಯ ರಕ್ಷಣೆಯಲ್ಲಿ ಉನ್ನತ ವೈದ್ಯಕೀಯ ಸೇವೆ, ವೈದ್ಯಕೀಯ ತಂತ್ರಜ್ಞಾನಗಳ ಕೊರತೆಯಿಂದಾಗಿ ರೋಗಗಳ ಆಗರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಉಷ್ಣ ವಿದ್ಯುತ್ ಸ್ಥಾವರಗಳಿಂದ ನಿರಂತರವಾಗಿ ಹೊರಬೀಳುತ್ತಿರುವ ಹಾರೋಬೂದಿ ಗಾಳಿಯಲ್ಲಿ ಸೇರಿಕೊಂಡು, ಇಲ್ಲಿನ ಜನತೆಗೆ ಶ್ವಾಸಕೋಶ ಮತ್ತು ಸಂಬಂತ ರೋಗಗಳ ಹೆಚ್ಚಾಗಿ ಬದುಕುವುದೇ ಕಷ್ಟವಾಗಿದೆ. ಸೂಕ್ತ ಚಿಕಿತ್ಸೆ ಇಲ್ಲದೇ ಜನರು ಸಂಕಷ್ಟ ಅನುವಿಸುತ್ತಿದ್ದಾರೆ ಎಂದರು. ಆದ್ದರಿಂದ, ಏಮ್ಸ್ ಸಂಸ್ಥೆಯನ್ನು ರಾಯಚೂರಿನಲ್ಲಿ ನಿರ್ಮಾಣ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net