

ಬೆಳಗಾವಿ: ದಿ ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಶನ್ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ ವತಿಯಿಂದ ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ನಗರದ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಜರಿ ಜಿ.ಬಿ. ದ್ವಿತೀಯ ಸ್ಥಾನ ಪಡೆದು ಪ್ರೀ ನ್ಯಾಷನಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಸರ್ವ ಸದಸ್ಯರು, ಪ್ರಾಚಾರ್ಯರು, ಉಪ ಪ್ರಾಚಾರ್ಯರು,
ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.