

ಕುಶಾಲನಗರ: ಕುಶಾಲನಗರ ಸಮೀಪದ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗೆ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಬುಧವಾರ ಭೇಟಿ ನೀಡಿ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಪರಿಶೀಲಿಸಿ, ಸಂವಾದ ನಡೆಸಿದರು.
ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಬೆಂಗಳೂರಿಗೆ ವಾಪಸಾಗುವ ಮಾರ್ಗಮಧ್ಯೆ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ವೇಳೆ 10 ನೇ ತರಗತಿಯ ಮಕ್ಕಳ ಕಲಿಕಾ ಪ್ರಗತಿ ಕುರಿತು ಮುಖ್ಯಶಿಕ್ಷಕ ಸೋಮಯ್ಯ ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ, ಚರ್ಚಿಸಿ, ಶಾಲೆಯಲ್ಲಿ ವಿವೇಕ ಯೋಜನೆಯಡಿ ನಡೆಯುತ್ತಿರುವ ತರಗತಿ ಕೊಠಡಿಯ ಕಾಮಗಾರಿಯನ್ನು ಪರಿಶೀಲಿಸಿದರು.
ಡಿಡಿಪಿಐ ಸಿ.ರಂಗಧಾಮಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಲೀಲಾವತಿ, ಸಹಶಿಕ್ಷಕರು ಇತರರು ಇದ್ದರು.