ಐಕ್ಯೂಎಸಿ ಘಟಕದಿಂದ ಉನ್ನತ ಶಿಕ್ಷಣದ ಅಭಿವೃದ್ಧಿ ಸಾಧ್ಯ

P1 21 2 25
ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ತೋಟಗಾರಿಕೆ ವಿವಿ ಕುಲಸಚಿವ ಮಹದೇವ ಮುರಗಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ, ಐಕ್ಯೂಎಸಿ ಸಂಚಾಲಕ ಡಾ.ಪ್ರಭುದೇವ ಮಂಡಿ ಮತ್ತಿತರರು ಇದ್ದರು.
Published on

ಬಾಗಲಕೋಟೆ: ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಽಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವ ಮಹಾದೇವ ಮುರಗಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಐಕ್ಯೂಎಸಿ) ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಉನ್ನತ ಶಿಕ್ಷಣದಲ್ಲಿ ಬೋಧಕರು ತಮ್ಮ ಬೋಧನೆಯ ಜೊತೆ ಜೊತಗೆ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು. ಕಾಲೇಜುಗಳಲ್ಲಿ ಪಾರದರ್ಶಕವಾದ ಆಡಳಿತವನ್ನು ನೀಡಿ, ಮೂಲಭೂತ ಸೌಲಭ್ಯ ಒದಗಿಸಬೇಕು. ಕಾಲೇಜಿನ ಅಭಿವೃದ್ಧಿಯಲ್ಲಿ ಬೋಧಕರಷ್ಟೆ ಬೋಧಕೇತರ ಸಿಬ್ಬಂದಿ ಪ್ರರಿಶ್ರಮ ಮುಖ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ, ಕಾಲೇಜಿನ ಅಭಿವೃದ್ಧಿಗೆ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೇ ವಿದ್ಯಾರ್ಥಿಗಳು ಪಂಚೇAದ್ರಿಗಳಿದ್ದAತೆ. ಇವರೆಲ್ಲರೂ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪಾಲಿಸಿದರೆ ಕಾಲೇಜು ಹಾಗೂ ಉನ್ನತ ಶಿಕ್ಷಣದ ಬೆಳವಣಿಗೆ ಸಾಧ್ಯ ಎಂದು ತಿಳಿಸಿದರು.

ಉನ್ನತ ಶಿಕ್ಷಣದಲ್ಲಿ ಐಕ್ಯೂಎಸಿ ಪಾತ್ರ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಐಕ್ಯೂಎಸಿ ಸಂಚಾಲಕ ಡಾ.ಪ್ರಭುದೇವ ಮಂಡಿ, ಪದವಿ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳ ಪ್ರಗತಿಗೆ ಪೂರಕವಾದ ಕೌಶಲ್ಯಗಳನ್ನು ಬಳಸಿಕೊಂಡು ಬೋಧಕರು ತಮ್ಮ ಬೋಧನೆಯಲ್ಲಿ ಹೊಸಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿ ಬೋಧನೆ ಮಾಡಬೇಕು. ಇದರಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗ ಸಹ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಮಾತನಾಡಿ, ಯುಜಿಸಿ ರಚಿಸಿರುವ ನೂತನ ಶೈಕ್ಷಣಿಕ ನಿಯಮಾವಳಿಯಲ್ಲಿ ನ್ಯಾಕ್ ಮತ್ತು ಐಕ್ಯೂಎಸಿ ಘಟಕಗಳ ಪಾತ್ರ ಮಹತ್ವದ್ದಾಗಿವೆ. ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ವಿದ್ಯಾರ್ಥಿಯ ಕಲಿಕೆ, ಅಭಿವೃದ್ಧಿ ಇವುಗಳ ಸಮನ್ವಯತೆ ಮೂಲಕ ಉನ್ನತ ಶಿಕ್ಷಣವನ್ನು ಅಭಿವೃದ್ಧಿ ಪಡಿಸಬೇಕಾಗುತ್ತದೆ ಎಂದರು.

ವಿಚಾರ ಸಂಕಿರಣದಲ್ಲಿ ವಿವಿಧ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರೊ.ಪರಸಪ್ಪ ತಳವಾರ ಪ್ರಾರ್ಥಸಿದರು, ಐಕ್ಯೂಎಸಿ ಸಹ ಸಂಚಾಲಕ ಡಾ.ಮೂಬಿನ್ ಬೆಳಗಾಮ್ ಸ್ವಾಗತಿಸಿದರು, ಡಾ.ಸುಮಂಗಲಾ ಮೇಟಿ ವಂದಿಸಿದರು, ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net