ಐತಿಹಾಸಿಕ ತೀರ್ಪು

CTD SRI MADARA SRI--0002
Published on

ಚಿತ್ರದುರ್ಗ: ಒಳಮೀಸಲು ಕುರಿತಂತೆ ಸುಪ್ರೀಂಕೋರ್ಟ್‌ನ ಏಳು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರ ಐತಿಹಾಸಿಕ ತೀರ್ಪು ನೀಡಿದೆ ಎಂದು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದ್ದಾರೆ.
ಕಳೆದ ಮೂರು ದಶಕಗಳ ಸುದೀರ್ಘ ಹೋರಾಟಕ್ಕೆ ಸಂದ ಜಯ ಇದಾಗಿದೆ. ಜನಸಂಖ್ಯಾವಾರು ಮೀಸಲಾತಿ ಹಂಚಿಕೆಗೆ ಇದು ಸಹ ಕಾರಿ ಆಗಿದೆ. ಮೀಸಲು ವರ್ಗೀಕರಣದ ಅಧಿಕಾರ ರಾಜ್ಯಗಳಿಗೆ ಇರಬೇಕೆಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ಪೀಠ ಪ್ರತಿಪಾದಿಸಿತ್ತು. ಈ ಅಂಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಎಲ್ಲ 101 ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೀರ್ಪು ನೆರವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net