

ಚಿಕ್ಕಮಗಳೂರು: ಆಟೋದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ೫೦ ಸಾವಿರ ರೂ. ಮೌಲ್ಯದ ೫ ಕೆಜಿ ೧೪೩ ಗ್ರಾಂ ಗಾಂಜಾ ಹಾಗೂ ಗಾಂಜಾ ಸಾಗಣೆಗೆ ಬಳಸಿದ್ದ ಪ್ಯಾಸೆಂಜರ್ ಅಟೋ ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಡಿವೈಎಸ್ಪಿ ಶೈಲೇಂದ್ರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಸಿಪಿಐ ಸಚಿನ್ ಕುಮಾರ್, ಪಿಎಸ್‌ಐ ರಘುನಾಥ, ಸಿಬ್ಬಂದಿಗಳಾದ ಲೋಹಿತ್, ಯುವರಾಜ, ಮಹೇಶ್, ಸುನಿಲ್, ಕಿರಣ, ಶಶಿಧರ್, ಶಿವರಾಜ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಗಾಂಜಾ ಹಾಗೂ ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ. ಗಾಂಜಾ ಸಾಗಣೆ ಸಂಬAಧ ಇಬ್ಬರು ಆರೋಪಿಗಳ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.