ಐವರಲ್ಲಿ ಕೋವಿಡ್-19 ಪಾಸಿಟಿವ್

Covid
Published on

ಚಿತ್ರದುರ್ಗ: ಕೇರಳದ ಶಬರಿಮಲೆ ಯಾತ್ರೆಗೆ ತೆರಳಿ ಹಿಂದಿರುಗಿದ್ದ ಓರ್ವ ಸೇರಿ ಜಿಲ್ಲೆಯ ಐವರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಚಿತ್ರದುರ್ಗ, ಚಳ್ಳಕೆರೆ ತಲಾ 2, ಮೊಳಕಾಲ್ಮುರಿನಲ್ಲಿ 1 ಪ್ರಕರಣ ಪತ್ತೆಯಾಗಿವೆ. ಇನ್ನುಳಿದ ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ತಾಲೂಕುಗಳಲ್ಲಿ ಯಾವುದೇ ಪ್ರಕರಣ ಈವರೆಗೆ ಪತ್ತೆಯಾಗಿಲ್ಲ.

ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾದ ಬಳಿಕ ಜಿಲ್ಲೆಯಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇರುವ ಜಿಲ್ಲೆಯ 677 ಮಂದಿಗೆ ಪರೀಕ್ಷಿಸಲಾಗಿದೆ.

ಈಗ ಐವರಲ್ಲಿ ಕೋವಿಡ್-19 ದೃಢಪಟ್ಟಿದ್ದು, ಬೆಂಗಳೂರಿನ ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಜೆಎನ್.1 ಪಾಸಿಟಿವ್ ಅಥವಾ ನೆಗೆಟಿವ್ ಎಂಬುದು ತಿಳಿಯಲಿದೆ. ಸೋಂಕಿತರು ಗೃಹ ಆರೈಕೆಯಲ್ಲಿದ್ದು, ಆರೋಗ್ಯದ ಮೇಲೆ ಇಲಾಖೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net