ಐಶ್ವರ್ಯ ಕಾಲೇಜಿನಲ್ಲಿ ಸ್ವಾಗತ ಕಾರ್ಯಕ್ರಮ

30Kush01
Published on

ಕುಶಾಲನಗರ: ಪಟ್ಟಣದ ಐಶ್ವರ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇತ್ತೀಚೆಗೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯು ವಿದ್ಯಾರ್ಥಿಗಳು ಹೂ ನೀಡಿ ಸ್ವಾಗತಿಸಿದರು.
ಪ್ರಾಂಶುಪಾಲ ಅಮ್ಮಾಟಂಡ ಜೋಯಪ್ಪ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರ ಜೀವನ ಚರಿತ್ರೆ ಹೇಳಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊದಲ ವರ್ಷದ ಪಿಯು ವಿದ್ಯಾರ್ಥಿ ಕಿಶನ್ ಅದೃಷ್ಟ ವಿದ್ಯಾರ್ಥಿಯಾಗಿ ಆಯ್ಕೆಯಾದರು. ದ್ವಿತೀಯ ಪಿಯುಸಿಯ ವೈಷ್ಣವಿ ಮತ್ತು ತಂಡ ಪ್ರಾರ್ಥನೆ ಮಾಡಿದರೆ, ಸೋನಿಯಾ ಸ್ವಾಗತಿಸಿದರು. ಧೃತಿ ಮತ್ತು ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net