

ಮಂಗಳೂರು: ಐಸಿಸ್ ನಂಟು ಹೊಂದಿದ್ದ ಆರೋಪದಲ್ಲಿ ಎನ್ ಐಎ ಅಧಿಕಾರಿಗಳಿಂದ ದಾಳಿ ನಡೆದ ಉಳ್ಳಾಲದ ಮಾಜಿ ಶಾಸಕ ಇದಿನಬ್ಬರ ಪುತ್ರನ ಮನೆಗೆ ಬಜರಂಗದಳದ ಕಾರ್ಯಕರ್ತರು ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮುಖಂಡ ಶರಣ್ ಪಂಪುವೆಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು. ಬಳಿಕ ಉಳ್ಳಾಲ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.