ಐಸೋಲೇಷನ್ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

25ark3
ಅರಕಲಗೂಡಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಐಸೋಲೇಷನ್ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಟಿ.ರಾಮಸ್ವಾಮಿ ಶನಿವಾರ ಭೂಮಿ ಪೂಜೆ ನೆರೆವೇರಿಸಿದರು.ಡಾ.ಪುಷ್ಪಲತಾ, ಡಾ.ಸ್ವಾಮಿಗೌಡ, ರಶ್ಮಿ, ಕೃಷ್ಣಯ್ಯ ಇತರರಿದ್ದರು.
Published on

ಅರಕಲಗೂಡು: ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಐಸೋಲೇಷನ್ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಟಿ.ರಾಮಸ್ವಾಮಿ ಶನಿವಾರ ಭೂಮಿಪೂಜೆ ನೆರೆವೇರಿಸಿದರು.

ಬಳಿಕ ಮಾತನಾಡಿದ ಅವರು, ಸಾಂಕ್ರಾಮಿಕ ರೋಗಗಳಿಗೆ ತುತ್ತಾದವರನ್ನು ಪ್ರತ್ಯೇಕವಾಗಿ ಇರಿಸುವ ಉದ್ದೇಶದಿಂದ 12 ಹಾಸಿಗೆಗಳ ಐಸೋಲೇಷನ್ ಕೇಂದ್ರವನ್ನು 30 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 4 ತಿಂಗಳ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದು ಹೇಳಿದರು.

ತಾಲೂಕಿನ ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 6 ಹಾಸಿಗೆಗಳ ತುರ್ತು ನಿಗಾ ಘಟಕ (ಐಸಿಯು) ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿದೆ. ರಾಮನಾಥಪುರ-ಕೊಣನೂರು ನಡುವೆ 23 ಲಕ್ಷ ರೂ.ವೆಚ್ಚದಲ್ಲಿ ಎಕ್ಸ್‌ಪ್ರೆಸ್ ವಿದ್ಯುತ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ್ದು, ಕಾಮಗಾರಿ ಆರಂಭವಾಗಿದೆ, ಇದರಿಂದ ಈ ಎರಡೂ ಪಟ್ಟಣಗಳಿಗೆ ನಿರಂತರ ವಿದ್ಯುತ್ ಸೌಲಭ್ಯ ದೊರಕಲಿದೆ ಎಂದರು.

ಪಪಂ ಉಪಾಧ್ಯಕ್ಷೆ ಎಚ್.ಎಸ್.ರಶ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ, ಸದಸ್ಯ ಅನಿಕೇತನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸ್ವಾಮಿಗೌಡ, ಪಪಂ ಮುಖ್ಯಾಧಿಕಾರಿ ಶಿವಕುಮಾರ್, ವಕೀಲ ಶಂಕರಯ್ಯ, ಮುಖಂಡರಾದ ಹರೀಶ್, ಅಬ್ದುಲ್ ಅಲೀಂ, ಆಮ್ ಆದ್ಮಿ ಪಕ್ಷದ ಬಿ.ಟಿ.ಜವರೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net