ಒಂಟಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ |crime

ಪತಿ ಎಂದಿನಂತೆ ವ್ಯಾಪಾರಕ್ಕೆ ತೆರಳಿದ್ದರು. ಮಧ್ಯಾಹ್ನ 3 ಗಂಟೆಗೆ ಮನೆಗೆ ವಾಪಸಾದಾಗ, ಮನೆಯೊಳಗೆ ಹೆಂಡತಿ ಕಾಂತಿ ಗಾಯಗೊಂಡು ರಕ್ತಸ್ರಾವದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
Mulabagilu crime
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಸೇರಿ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. Mulabagilu crime
Published on: 
  • ಮೈಮೇಲಿದ್ದ ಚಿನ್ನಾಭರಣ ನಾಪತ್ತೆ

  • ತಲೆ ಭಾಗಕ್ಕೆ ತೀವ್ರ ಗಾಯ

  • ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

  • ಸ್ಥಳಕ್ಕೆ ಎಸ್ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ

ಮುಳಬಾಗಿಲು: ತೋಟಲಪಾಳ್ಯದ ಶ್ರೀ ಶೃಂಗೇರಿ ಶಾರದ ಬೀದಿಯಲ್ಲಿ ಶುಕ್ರವಾರ ಹಾಡಹಗಲೇ ಮನೆಯೊಳಗೆ ನುಗ್ಗಿ ಕಾಂತಿ (35) ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಕೆಯ ಮೈಮೇಲಿದ್ದ ಚಿನ್ನಾಭರಣ ನಾಪತ್ತೆಯಾಗಿವೆ.

ಕಾಂತಿ ಹಾಗೂ ಪತಿ ವೀರಮಣಿ ನಿಪ್ಪಟ್ಟು, ಚಕ್ಕಲಿ ತಯಾರಿಸಿ ವಾರಾಟ ವಾಡಿಕೊಂಡು ಜೀವನ ಸಾಗಿಸುತ್ತಿದ್ದು, ಎಂದಿನಂತೆ ಶುಕ್ರವಾರ ಬೆಳಗ್ಗೆ ವೀರಮಣಿ ವ್ಯಾಪಾರಕ್ಕೆ ತೆರಳಿದ್ದರು. ಮಧ್ಯಾಹ್ನ 3 ಗಂಟೆಗೆ ಮನೆಗೆ ವಾಪಸಾದಾಗ, ಮನೆಯೊಳಗೆ ಕಾಂತಿ ಗಾಯಗೊಂಡು ರಕ್ತಸ್ರಾವದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ತಲೆ ಭಾಗಕ್ಕೆ ತೀವ್ರ ಗಾಯವಾಗಿದ್ದು, ಕೂಡಲೇ ಗಾಯಾಳುವನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್, ಎಎಸ್‌ಪಿ ಮನೀಷಾ, ನಗರ ಠಾಣೆ ಇನ್‌ಸ್ಪೆಕ್ಟರ್ ಎ.ಸುಧಾಕರ ರೆಡ್ಡಿ, ಗ್ರಾವಾಂತರ ಠಾಣೆ ಸಿಪಿಐ ಕೆ.ಜಿ. ಸತೀಶ್ ಸೇರಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net