

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ದೇಶ, ಒಂದು ಚುನಾವಣೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು, ಇದೊಂದು ಉತ್ತಮ ನಿರ್ಧಾರವಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ಹೇಳಿದ್ದಾರೆ.
ದೇಶದ ಹಿತಾಸಕ್ತಿಯ ಪ್ರಮುಖ ಉz್ದÉÃಶ ಇದರ ಹಿಂದಿದೆ. ೧೯೫೧, ೧೯೬೭ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು ೧೯೯೯ರ ತನ್ನ ೧೭೦ನೇ ವರದಿಯಲ್ಲಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು. ಮಾಜಿ ರಾಷ್ಟçಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
೨೮ ರಾಜ್ಯಗಳು, ೧೪೦ ಕೋಟಿ ಜನರನ್ನು ಹೊಂದಿರುವ ಬೃಹತ್ ಪ್ರಜಾಪ್ರಭುತ್ವ ರಾಷ್ಟç ನಮ್ಮದು. ಭಾರತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸಾಕಷ್ಟು ಹಣ ಖರ್ಚಾಗುತ್ತಿತ್ತು. ಸಾಕಷ್ಟು ಜನ ಸರ್ಕಾರಿ ನೌಕರರ ಶ್ರಮ ವ್ಯಯ ಆಗುತ್ತಿತ್ತು. ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ ೧೦೦ ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿ¯್ಲÁ, ತಾಲೂಕು, ಗ್ರಾಮ ಪಂಚಾಯಿತಿ, ಪುರಸಭೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉz್ದÉÃಶವಿದೆ ಎಂದು ತಿಳಿಸಿz್ದÁರೆ.