ಒಂದು ಹನಿ ನೀರನ್ನೂ ಕೊಡಲಾರೆವು

26ydg06
Published on

ಯಾದಗಿರಿ: ತೀವೃ ಬರಗಾಲದ ಮಧ್ಯೆಯೇ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಸೋಮವಾರ ನಗರದ ಸುಭಾಶ್ಚಂದ್ರ ಬೋಸ್ ವೃತ್ತದ ಬಳಿ ನಮ್ಮ ಕರ್ನಾಟಕ ಸೇನೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಕೃಷ್ಣರಾಜ ಸಾಗರದಲ್ಲಿ ನೀರಿಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಿಲ್ಲದೆ ರೈತಾಪಿ ವರ್ಗಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಬೆಂಗಳೂರು ಸೇರಿ ಹಳೆ ಮೈಸೂರು ಭಾಗದ ಕೋಟ್ಯಾಂತರ ಜನತೆ ಕಾವೇರಿ ನದಿ ನೀರಿನ ಮೇಲೆ ಅವಲಂಬನೆಯಾಗಿದ್ದಾರೆ. ಆದರೆ, ಸರಕಾರ ಈ ವೇಳೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿಯಂತ್ರಣ ಮಂಡಳಿ ದಿನವೂ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ನಂತೆ 15 ದಿನ ನೀರು ಹರಿಸಲು ಆದೇಶಿಸಿದೆ. ಇದು ಕನ್ನಡ ನಾಡಿಗೆ ತೋರಿದ ಮಲತಾಯಿ ಧೋರಣೆ. ಈ ವಿಷಯದಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರು ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net