

ಬಳ್ಳಾರಿ : ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಬಂಧಿಸಿ 3 ಲಕ್ಷ ರೂ. ಮೌಲ್ಯದ ಒಂಬತ್ತು ಬೈಕ್‌ಗಳನ್ನು ಗುರುವಾರ ವಶಪಡಿಸಿಕೊಳ್ಳಲಾಗಿದೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವೇಳೆ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ನಗರದಲ್ಲಿ ಎಂಟು ಹಾಗೂ ವಿಜಯನಗರ ಜಿಲ್ಲೆಯಲ್ಲಿ ಒಂದು ಸೇರಿ ಒಟ್ಟು ಒಂಬತ್ತು ಬೈಕ್ ಕಳ್ಳತನ ಮಾಡಿರುವದಾಗಿ ಒಪ್ಪಿಕೊಂಡಿದ್ದಾನೆ. ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.