

ಸರಗೂರು: ಒಣ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ನಂಜನಗೂಡು ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದಾರೆ.
ಕನಯ್ಯ ಚೌಹಾಣ್ ಬಂಧಿತ ಆರೋಪಿ. ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕವರ್‌ನಲ್ಲಿ ಸುಮಾರು ನೂರು ಗ್ರಾಂ ಗಾಂಜಾವನ್ನು ಆರೋಪಿ ಸಾಗಿಸುತ್ತಿದ್ದಾಗ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನಂತರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಅಬಕಾರಿ ಇಲಾಖೆ ಅಧಿಕಾರಿ ಮುದಾಸರ್ ಬಾಷಾ ತಿಳಿಸಿದ್ದಾರೆ.