ಒತ್ತಡ ಬದುಕಿನಿಂದ ಹೊರಬರಲು ಕ್ರೀಡೆ ಅವಶ್ಯಕ

bkt-29-2.
ಪೊಲೀಸ್ ಕ್ರೀಡಾಕೂಟದ ದೃಶ್ಯ
Published on

ಬಾಗಲಕೋಟೆ: ಒತ್ತಡ ಬದುಕಿನಿಂದ ಹೊರಬಂದು ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಲು ಕ್ರೀಡೆಗಳು ಅವಶ್ಯವಾಗಿವೆ ಎಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್.ದೇಶಪಾಂಡೆ ಹೇಳಿದರು.
ನವನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡ ವಾರ್ಷಿಕ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಪೊಲೀಸ್ ವ್ಯವಸ್ಥೆಯಲ್ಲಿ ಪ್ರತಿನಿತ್ಯ ಒಂದಿಲ್ಲ ಒಂದು ಒತ್ತಡದಲ್ಲಿ ಕೆಲಸಮಾಡಬೇಕಾಗುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದರಿಂದ ಸ್ವಲ್ಪ ಮಟ್ಟಿಗೆ ವಿಶ್ರಾಂತಿ, ಹುಮ್ಮಸ್ಸು ನೀಡುತ್ತದೆ ಎಂದರು.

ವೃತ್ತಿಯಲ್ಲಿ ಹತ್ತಾರು ಕಾರ್ಯಗಳನ್ನು ಮಾಡುತ್ತಿರುವದರಿಂದ ಸಹಜವಾಗಿ ಒತ್ತಡದಲ್ಲಿರುತ್ತೇವೆ. ಯಾವುದಾದರೂ ಒಂದು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಒತ್ತಡ ಕಡಿಮೆ ಆಗುತ್ತದೆ. ಕೆಲಸದಲ್ಲಿ ಉಲ್ಲಾಸ ಇರುತ್ತದೆ. ಕ್ರೀಡೆಗಳಲ್ಲಿ ಸೋಲು ಗೆಲುವುಗಳನ್ನು ಸಹಜವಾಗಿದ್ದು, ಅವುಗಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿ ಆನಂದಿಸಲು ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಜಯಪ್ರಕಾಶ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net