

ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ಇದರ ನಿವಾರಣೆಗೆ ಆರೋಗ್ಯ ಶಿಬಿರ ಸಹಕಾರಿ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಗೌರವ ಕಾರ್ಯದರ್ಶಿಗಳು ಡಾ. ಎಂ ಡಿ ಸಮುದ್ರ ಅವರು ಹೇಳಿದರು.
ಆದರ್ಶ ಶಿಕ್ಷಣ ಸಂಸ್ಥೆಗೆ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಗದಗ ಜಿಲ್ಲಾ ರೆಡ್ ಕ್ರಾಸ್ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನ ನಿಮಿತ್ಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬರಪೀಡಿತ ಪ್ರದೇಶದಲ್ಲಿ 40 ಬಡ ಕುಟುಂಬಗಳಿಗೆ ಕಿಟ್ ವಿತರಣ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಭಾಪತಿಗಳು ಡಾ. ಆರ್. ಎನ್. ಗೋಡಬೋಲ ಮಾತನಾಡಿ ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ, ಗುಳಿಗೆ ಮುಂತಾದ ಕಷ್ಟಗಳಿಂದ ಪಾರಾಗಬಹುದು. ಹಳ್ಳಿಗಳಲ್ಲೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.
ಡಿ ಜಿ ಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸುವರ್ಣ ನಿಡಗುಂದಿ ಅವರು ಮಾತನಾಡಿ ‘ಆರೋಗ್ಯ ಇದ್ದರೆ ನಾವು ಸುಖವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿಯುವ ಬದಲು ಕಾಯಿಲೆ ಬರದಂತೆ ತಡೆಯುವುದು ಜಾಣತನ’ ಎಂದು ತಮ್ಮ ಮಾತುಗಳಲ್ಲಿ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಅಂತೂರ ಬೆಂತೂರ ಗ್ರಾಮದ ಸುಮಾರು 400ಕ್ಕೂ ಹೆಚ್ಚು ಗುರು ಹಿರಿಯರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು ಇದೇ ಸಂದರ್ಭದಲ್ಲಿ ಗದಗ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯಿಂದ ಕಿಟ್, ಹಾಗೂ ಮಜ್ಜರದಾನಿ ವಿತರಣೆ ಮಾಡಲಾಯಿತು ಸಮಾರಂಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಗೌಡ ಎಚ್ ಪಾಟೀಲ್, ಎಸ್ ಡಿ ಎಂ ಸಿ ಪ್ರಾಥಮಿಕ ಶಾಲೆ ಅಧ್ಯಕ್ಷರಾದ ಬಿ. ಎ. ಮನಕವಾಡ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ ಜೈನರ, ವಿದ್ಯಾರ್ಥಿ ಮುಖಂಡನಾದ ಮನೋಜ್ ದಲ ಬಂಜನ ಗ್ರಾಮ ಪಂಚಾಯಿತಿಯ ಸದಸ್ಯರು, ಎಸ್ ಡಿ ಎಂ ಸಿ ಯ ಸದಸ್ಯರು, ಸ್ವಯಂಸೇವಕ ಸೇವಕಿಯರು ಈ ಒಂದು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗಿಯಾಗಿದ್ದರು.