ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸೇರಿಸಿ

mahasabha memo
Published on

ಬೀದರ್: ವೀರಶೈವ ಲಿಂಗಾಯತ ಸಮಾಜವನ್ನು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗ (ಒಬಿಸಿ)ಗಳ ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.

ಮಹಾಸಭಾ ನಿಯೋಗ ನಗರದಲ್ಲಿ ಶುಕ್ರವಾರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದರಡ್ಡಿಗೆ ಸಲ್ಲಿಸಿ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರಗಳಲ್ಲಿ ಕೇಂದ್ರದ ಅನುಮತಿ ಪಡೆದು ವೀರಶೈವ ಲಿಂಗಾಯತ ಪಂಗಡಗಳನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲಾಗಿದೆ. ಸಮುದಾಯದ ಜನರಿಗೆ ಅಲ್ಲಿನ ಸರ್ಕಾರದ ವಿವಿಧ ಸೌಲಭ್ಯ ಸಿಗುತ್ತಿವೆ. ಆದರೆ ನಮ್ಮಲ್ಲಿ ಮಾತ್ರ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದೆ.

ಕೂಡಲೇ ಸಮುದಾಯವನ್ನು ಕೇಂದ್ರದ ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ನಿರ್ಲಕ್ಷಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದೆ. ಮಹಾಸಭಾ ಜಿಲ್ಲಾಧ್ಯಕ್ಷ ವೈಜಿನಾಥ ಕಮಠಾಣೆ, ಜಿಲ್ಲಾ ಉಸ್ತುವಾರಿ ಡಾ.ಗುರಮ್ಮ ಸಿದ್ದಾರಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net