ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯ ಆ.೧ಕ್ಕೆ ವೀರಶೈವ ಮಹಾಸಭಾ ಪ್ರತಿಭಟನೆ

IMG-20220729-WA0018.jpg
Published on

ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಆಗ್ರಹಿಸಿ ವೀರಶೈವ ಲಿಂಗಾಯತ ಮಹಾಸಭಾದಿಂದ ಆ. 1ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ತಿಳಿಸಿದರು.

ವೀರಶೈವ ಲಿಂಗಾಯತ ಸಮುದಾಯದಲ್ಲಿ 92ಕ್ಕೂ ಹೆಚ್ಚು ಒಳಪಂಗಡಗಳಿದ್ದು, ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸುವುದರಿಂದ ಐಎಎಸ್, ಐಪಿಎಸ್, ಐಅರ್‌ಎಸ್ ಇತರೆಡೆ ಉದ್ಯೋಗಾವಕಾಶಕ್ಕೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಆಗಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಆಗಸ್ಟ್ 1ರಂದು ಮಧ್ಯಾಹ್ನ 12ಕ್ಕೆ ಮಹಾತ್ಮ ಗಾಂಧಿ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ, ಉಪಾಧ್ಯಕ್ಷ ಎಸ್.ಎಸ್. ಗಣೇಶ್, ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಆವರಗೊಳ್ಳ ಪುರವರ್ಗದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿಯ ಹಿರೇಕಲ್ಮಠದ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ಸ್ವಾಮೀಜಿ, ಚನ್ನಗಿರಿಯ ಕೇದಾರ ಲಿಂಗೇಶ್ವರ ಸ್ವಾಮೀಜಿ, ಹರಿಹರದ ಪುಣ್ಯಕೋಟಿ ಮಠದ ಸ್ವಾಮೀಜಿ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು. ಮಹಾಸಭಾದ ನಗರ ಘಟಕದ ಅಧ್ಯಕ್ಷ ಜಿ. ಶಿವಯೋಗಪ್ಪ, ನಿಖಿಲ್ ಕೊಂಡಜ್ಜಿ, ಶುಭ ಐನಳ್ಳಿ, ಶೋಭಾ ಕೊಟ್ರೇಶ್, ಸಂದೀಪ್ ಅಣಬೇರು, ಜಯಪ್ರಕಾಶ್ ಮಾಗಿ ಸುದ್ದಿಗೋಷ್ಠಿಯಲ್ಲಿ ಇದ್ದರು. ---
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net