

ರಾಮನಗರ
ಬಹುತೇಕ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳೇ ನಿರ್ಣಾಯಕ ಪಾತ್ರ ನಿರ್ವಹಿಸಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರ ಬಾಬು ತಿಳಿಸಿದರು.
ರಾಮನಗರದ ಹನುಮಂತನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ಗೌಡ ಪರವಾಗಿ ಮತಯಾಚಿಸಿ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿಯಾಗಲು 250ಕ್ಕೂ ಹೆಚ್ಚು ಹಿಂದುಳಿದ ಒಬಿಸಿ ಸಮಯದಾಯಗಳಿಗೆ ಬಿಜೆಪಿ ಸರ್ಕಾರ ಆದ್ಯತೆ ನೀಡಿದೆ. ಕೇಂದ್ರ ಸಚಿವ ಸಂಪುಟದಲ್ಲಿ 27 ಮಂದಿ ಹಿಂದುಳಿದ ಸಮುದಾಯದವರಿಗೆ ಅವಕಾಶ ನೀಡಿದೆ. ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸಾಮಾಜಿಕವಾಗಿ ಮುಂದೆ ಬರಲು ಪಕ್ಷ ಬಿಜೆಪಿ ಪ್ರೋತ್ಸಾಹ ನೀಡಿದೆ. ರಾಜ್ಯ ಸರ್ಕಾರದಿಂದಲೂ ಸಮುದಾಯಕ್ಕೆ ಹೆಚ್ಚು ಕೊಡುಗೆ ನೀಡಲಾಗಿದೆ ಎಂದರು.
ರಾಮನಗರ ಕ್ಷೇತ್ರದಿಂದ ಯುವ ಪ್ರತಿಭಾವಂತ ಗೌತಮ್ಗೌಡ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮುಂದೆಯೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಪಕ್ಷದ ಮುಖಂಡ ಡಿ .ನರೇಂದ್ರ, ಎಸ್.ಆರ್ನಾಗರಾಜು ಮುಂತಾದವರು ಇದ್ದರು.