ಒಳ ಮೀಸಲಾತಿ ಜಾರಿ ಬಳಿಕ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ

3 ckm 3 chandrashekar
ಮಾದಿಗ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್
Published on

ಚಿಕ್ಕಮಗಳೂರು: ಒಳ ಮೀಸಲಾತಿ ಜಾರಿ ಮಾಡಿದ ಬಳಿಕವೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಮಾದಿಗ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಕ್ ಹುದ್ದೆಗಳನ್ನು ತರಾತುರಿಯಲ್ಲಿ ಭರ್ತಿ ಮಾಡಲು ಹೊರಟಿರುವ ಕ್ರಮ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುವಂತಿದೆ ಎಂದು ದೂರಿದರು.

ಸದಾಶಿವ ಆಯೋಗದ ವರದಿ ಜಾರಿ ಮಾಡಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚನೆ ಮಾಡಲಾಗಿದೆ. ಆದರೆ ಈ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುವ ಮೊದಲೇ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಈ ಕ್ರಮ ಕೈಬಿಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರದ ಈ ಕ್ರಮ ಖಂಡಿಸಿ ಮಾ. ೧೯ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು. ಇದಲ್ಲದೆ ಮಾ. ೫ರಿಂದ ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳ ಹರಿಹರದಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದು. ಈ ಹಿಂದೆ ಚಿತ್ರದುರ್ಗದಲ್ಲಿ ನಡೆದ ಎಸ್ ಸಿ ಸಮಾವೇಶದಲ್ಲಿ ಒಳ ಮೀಸಲಾತಿ ಜಾರಿ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದರು. ಕೂಡಲೇ ಸರ್ಕಾರ ತಾನು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಮಾದಿಗ ಸಮಾಜದ ಅಧ್ಯಕ್ಷ ರಮೇಶ್, ಪ್ರಮುಖರಾದ ಜಗದೀಶ್, ನಾಗೇಂದ್ರಪ್ಪ, ಲಕ್ಷö್ಮಣ್, ತಂಗಲಿ ರಾಘವೇಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net