ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Published on

ಬಳ್ಳಾರಿ : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಎಚ್. ಹನುಮಂತಪ್ಪ ಮಾತನಾಡಿ, ಸುಪ್ರೀಂ ಕೋರ್ಟ್ ಆ. 1 ರಂದು ಎಸ್‌ಸಿ ಮೀಸಲಾತಿಯಲ್ಲಿ ಒಳಮೀಸಲಾತಿ ಉಪವರ್ಗಿಕರಿಸಲು ಆಯಾ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಹಕ್ಕಿದೆ ಎಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಅವಕಾಶ ವಂಚಿತ ನಾಡಿನ ಶೋಷಿತ ಸಮುದಾಯವು ಸ್ವಾಗತಿಸಿದೆ. ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ತುಂಬಬಾರದು. ಜನಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದು ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲರ್ಕ್ಷ ಧೋೀರಣೆ ಸಲ್ಲದು. ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯ ಒಳ ಹುನ್ನಾರವನ್ನು ಮುಂದುವರಿಸಿದರೆ ಮುಂದೆ ಅತ್ಯಂತ ಗಂಭೀರ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ 2023ರ ಚುನಾವಣಾ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿ ಘೋಷಿಸಿಕೊಂಡಂತೆ ಸುಪ್ರೀಂ ಕೋರ್ಟ್ ತೀರ್ಪು ಆರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕಿದೆ. ರಾಜ್ಯದಲ್ಲಿ ಎಸ್‌ಸಿ ಮೀಸಲಾತಿ ವರ್ಗಿಕರಿಸಿ ಒಳಮೀಸಲಾತಿ ಜಾರಿ ಮಾಡಬೇಕೆಂದು ಮೂರು ದಶಕಗಳಿಂದ ಹೋರಾಟಗಳು ನಡೆದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net