ಒಳ ಮೀಸಲಾತಿ ಜಾರಿಗೆ ಸಂಸತ್ತಿನಲ್ಲಿ ಮಂಡಿಸಿ

08-08-Shiva-4
ಒಳ ಮೀಸಲಾತಿ ಜಾರಿ ಬಿಲ್‌ನ್ನು ಸಂಸದ ಅವೇಶನದಲ್ಲಿ ಮಂಡಿಸುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಮಾರೆಪ್ಪ, ಪದಾಕಾರಿಗಳಾದ ಶಿವರಾಯ ಅಕ್ಕರಕಿ, ಜೆ.ಬಿ.ರಾಜು, ರಾಘವೇಂದ್ರ ಬೋರೆಡ್ಡಿ, ಹನುಮಂತು ಮನ್ನಾಪುರ, ಹೇಮರಾಜ ಅಸ್ಕಿಹಾಳ, ಎ.ರಾಮು, ಹುಲಿಗೆಪ್ಪ, ಚಂದ್ರು ಭಂಡಾರಿ ಇದ್ದರು.
Published on

ರಾಯಚೂರು: ಪ್ರಸಕ್ತ ಸಂಸತ್ತಿನ ಮುಂಗಾರು ಅವೇಶನದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ಕೈಗೊಳ್ಳಲಾಗಿದ್ದ ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಮತ್ತು ಒಳ ಮೀಸಲಾತಿ ಜಾರಿ ಮಸೂದೆಗಳನ್ನು ಮಂಡಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸಲು ಮತ್ತು ಒಳ ಮೀಸಲಾತಿ ಜಾರಿಗೆ ಸಂವಿಧಾನದ ಪರಿಚ್ಛೇದ 341(3) ತಿದ್ದುಪಡಿ ತರಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಳ ಮಾಡಿದ್ದು, ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗುವುದರಿಂದ ಸಂವಿದಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು.
ಜತೆಗೆ ಜೆ.ಮಾಧುಸ್ವಾಮಿ ನೇತೃತ್ವದ ಸಮಿತಿ ಶಿಾರಸ್ಸಿನಂತೆ ಪರಿಶಿಷ್ಟ ಜಾತಿಗಳ ಮೀಸಲಾತಿ ವಿಂಗಡಿಸಿ ಒಳ ಮೀಸಲಾತಿ ಜಾರಿಗೆ ಕೇಂದರ ಸರ್ಕಾರಕ್ಕೆ ಶಿಾರಸ್ಸು ಮಾಡಲಾಗಿದೆ. ಕೇಂದ್ರ ಸರ್ಕಾರ ಎರಡು ಬಿಲ್‌ಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅನುಮೋದನೆ ಪಡೆದು ಜಾರಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಮಾರೆಪ್ಪ, ಪದಾಕಾರಿಗಳಾದ ಶಿವರಾಯ ಅಕ್ಕರಕಿ, ಜೆ.ಬಿ.ರಾಜು, ರಾಘವೇಂದ್ರ ಬೋರೆಡ್ಡಿ, ಹನುಮಂತು ಮನ್ನಾಪುರ, ಹೇಮರಾಜ ಅಸ್ಕಿಹಾಳ, ಎ.ರಾಮು, ಹುಲಿಗೆಪ್ಪ, ಚಂದ್ರು ಭಂಡಾರಿ, ಆಂಜಿನೇಯ, ಪ್ರಸಾದ್ ಭಂಡಾರಿ, ತಾಯಪ್ಪ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net