

ಯಾದಗಿರಿ: ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಠ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಜಿ¯್ಲÁ ಘಟಕದಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಜಿ¯್ಲೆಯ ವಿವಿಧ ತಾಲೂಕು ಮತ್ತು ಹಳ್ಳಿಗಳಿಂದ ಆಗಮಿಸಿದ್ದ ಮಾದಿಗ ಸಮಾಜದ ಸಾವಿರಾರು ಜನರು, ರಾಜ್ಯ ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ನಾದ್ ಸಮ್ಮುಖದಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಸುಮಾರು ಮೂರು ತಾಸು ನಡೆದ ಈ ಪ್ರತಿಭಟನೆ ಇಲ್ಲಿನ ಸುಭಾಷ್ ಚೌಕ್ ಬಳಿ ಜಮಾವಣೆಗೊಂಡು ಸಾರ್ವಜನಿಕ ಸಭೆ ನಡೆಸಿತು. ಇಲ್ಲಿನ ತಹಸಿಲï ಕಚೇರಿ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.
ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು. ನೇತಾಜಿ ಸರ್ಕಲï ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಮಾಜದ ಮುಖಂಡರಾದ ದೇವೇಂದ್ರನಾಥ ನಾದ್, ಹಣಮಂತ ಇಟಗಿ, ಕಾಶಪ್ಪ ಹೆಗ್ಗನಗೇರಾ, ಹಣಮಂತ ಲಿಂಗೇರಿ, ಸ್ವಾಮಿದೇವ ದಾಸನಕೇರಿ ಮಾತನಾಡಿ, ೨೦೨೩ರ ಚುನಾವಣೆ ಪ್ರಣಾಳಿಕೆಯಲ್ಲಿ ೬ನೇ ಗ್ಯಾರಂಟಿ ಘೋಷಿಸಿದಂತೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಳೆದ ಆ.೧ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಈ ಕೂಡಲೇ ಮೀಸಲಾತಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ಇದು ಜಾರಿಯಾಗುವವರೆಗೂ ಬ್ಯಾಕಲಾಗ್ ಸೇರಿ ಯಾವುದೇ ಹುz್ದÉ, ನೇಮಕಾತಿ ಮಾಡಿಕೊಳ್ಳಬಾರದು. ಜನಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದು ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಮಾಡುತ್ತಿರುವ ವಿಳಂಬ ಅಕ್ಷಮ್ಯ ಅಪರಾಧವಾಗಿದೆ ಎಂದು ಸಿಎಂ ವಿರುದ್ಧ ಗುಡುಗಿದರು.
ಈ ಮಿಸಲಾತಿ ಜಾರಿಗೊಳಿಸುವಲ್ಲಿ ಎಐಸಿಸಿ ಅಧ್ಯP್ಷÀ ಮಲ್ಲಿಕಾರ್ಜುನ ಖರ್ಗೆ ಸೇರಿ ಕೆಲವರು ಅಡ್ಡಗಾಲು ಹಾಕುತ್ತಿz್ದÁರೆ. ಇದು ಸರಿಯಾದ ಕ್ರಮವಲ್ಲ. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯದ ಶಕ್ತಿ ಏನು ಅಂತ ತೋರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯ ಒಳಹುನ್ನಾರ ಮುಂದುವರೆಸಿದರೆ ಮುಂದೆ ಅತ್ಯಂತ ಉಗ್ರ ಹೋರಾಟ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಡಿಸಿ ಶರಣಬಸಪ್ಪ ಕೋಟೆಪ್ಪಗೊಳ ಅವರಿಗೆ ಸಲ್ಲಿಸಲಾಯಿತು. ಸುಮಾರು ಮೂರು ತಾಸು ನಡೆದ ಪ್ರತಿಭಟನೆ ಮತ್ತು ಬಹಿರಂಗ ಸಭೆಯಿಂದ ನಗರದ ವಿವಿಧ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸೂಕ್ತ ಪೊಲೀಸ್ ಬಂದೊಬಸ್ತ್ ಮಾಡಲಾಗಿತ್ತು.