ಒಳ ಮೀಸಲಾತಿಗೆ ಆಗ್ರಹಿಸಿ ತಮಟೆ ಚಳವಳಿ

bkt-14-3
ಬಾಗಲಕೋಟೆ ನಗರದ ಶಾಸಕ ಎಚ್.ವೈ.ಮೇಟಿ ಅವರಿಗೆ ಒಳ ಮೀಸಲಾತಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
Published on

ಬಾಗಲಕೋಟೆ: ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮಾದಿಗ, ಸಮಗಾರ, ಮಚಗಾರ, ಡೊಹರ, ಡಕ್ಕಲಿಗ ಜಾತಿ, ಉಪಜಾತಿ ಸಂಘಟನೆಗಳ ಒಕ್ಕೂಟ ಶನಿವಾರ ನವನಗರದ ಶಾಸಕ ಎಚ್.ವೈ.ಮೇಟಿ ಹಾಗೂ ವಿ.ಪ ಸದಸ್ಯ ಪಿ.ಎಚ್.ಪೂಜಾರ ಅವರ ಗೃಹ ಕಚೇರಿ ಎದುರು ಶನಿವಾರ ತಮಟೆ ಚಳುವಳಿ ನಡೆಸಿದರು.

ನವನಗರದ ಪೊಲೀಸ್ ಪ್ಯಾಲೇಸ್ ವೃತ್ತದಿಂದ ಆರಂಭಗೊAಡ ಚಳುವಳಿಯು ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಅವರ ಗೃಹ ಕಚೇರಿಗೆ ತೆರಳಿ ತಮಟೆ ಬಾರಿಸಿ ಪ್ರತಿಭಟಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಽವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಉತ್ತರ ಕರ್ನಾಟಕ ಭಾಗದ ಶಾಸಕರು ಧ್ವನಿ ಎತ್ತಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಒಳ ಮೀಸಲಾತಿ ಜಾರಿಗೆ ಆಗುವವರೆಗೂ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ನೀಡಬಾರದು. ಮೀಸಲಾತಿ ವಿರೋಽಸಿ ಡಿ.೧೬ ರಂದು ಬೆಳಗಾವಿಯಲ್ಲಿ ಹಕ್ಕೋತ್ತಾಯ ಸಮಾವೇಶ ನಡೆಯಲಿದೆ. ಹರಿಯಾಣದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ಬಂದ ಮೊದಲ ವಾರದಲ್ಲಿ ಒಳ ಮೀಸಲಾತಿ ಜಾರಿಗೆ ತಂದಿದೆ. ಅದೇ ರೀತಿ ರಾಜ್ಯ ಸರ್ಕಾರ ಜಾರಿ ತರುವಲ್ಲಿ ವಿ-Àಲವಾಗಿದೆ ಆರೋಪಿಸಿದರು. ಈ ಅಽವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ನಂತರ ವಿಧಾನ ಪರಿಷತ್ ಸದಸ್ಯ ಪಿ.ಎಚ್ .ಪೂಜಾರ ಅವರ ಜನಸಂಪರ್ಕ ಕಾರ್ಯಾಲಯದ ಮುಂದೆ ತಮಟೆ ಚಳುವಳಿ ನಡೆಸಿ ಮನವಿ ಸಲ್ಲಿಕೆ ಮಾಡಿದರು.

ಈ ವೇಳೆ ಒಕ್ಕೂಟದ ಮುಖಂಡರಾದ ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಹನಮಂತ ಮುತ್ತತ್ತಿ, ಸತೀಶ ಮಾದರ, ಧರ್ಮಣ್ಣ ಸನಕ್ಯಾನವರ್, ಚಂದ್ರಶೇಖರ ಮುಂಡೆವಾಡಿ, ನಿಂಗರಾಜ್ ಮಬ್ರಮಕರ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net