ಒಳ ರಸ್ತೆಗಳ ದುರಸ್ತಿಗೆ ಅನುದಾನ ನೀಡಿ

pradeep shettar
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮೊದಲೇ ಹಾಳಾಗಿದ್ದ ಅವಳಿ ನಗರದ ಒಳರಸ್ತೆಗಳು ಅತಿಯಾದ ಮಳೆಯಿಂದಾಗಿ ಮತ್ತಷ್ಟು ಹದಗೆಟ್ಟಿವೆ. ಒಳ ರಸ್ತೆಗಳ ದುರಸ್ತಿಗೆ ರಾಜ್ಯ ಸರ್ಕಾರ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಆಗ್ರಹಿಸಿದ್ದಾರೆ.

ಮಳೆಯಿಂದಾಗಿ ತಗ್ಗು ಗುಂಡಿಗಳು ನಿರ್ವಣವಾಗಿವೆ. ಇಂಥ ರಸ್ತೆಗಳಲ್ಲಿ ವಾಹನಗಳ ಸಂಚಾರವಿರಲಿ, ಜನರು ನಡೆದುಕೊಂಡು ಹೋಗುವುದಕ್ಕೂ ಪರದಾಡುವಂಥ ಪರಿಸ್ಥಿತಿ ನಿರ್ವಣವಾಗಿದೆ. ಕೆಲ ಒಳ ರಸ್ತೆಗಳ ಸ್ಥಿತಿಯಂತೂ ತುಂಬಾ ಶೋಚನಿಯವಾಗಿದೆ ಎಂದು ಹೇಳಿದ್ದಾರೆ.

ಕೆಲವು ಕಡೆ ಮಣ್ಣು ರಸ್ತೆಯ ಮೇಲೆ ಹರಡಿಕೊಂಡು ವಾಹನಗಳು ಸ್ಕಿಡ್ ಆಗಿ ಆಪಘಾತಗಳು ಸಂಭವಿಸಿವೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ರಸ್ತೆಗಳಲ್ಲಿ ಸಂಚರಿಸಲು ತುಂಬಾ ಅನಾನುಕೂಲವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net