ಒಳಗುತ್ತಿಗೆ ನೌಕರರ ಹುದ್ದೆ ಕಾಯಂಗೆ ಮನವಿ: ಹಿಮ್ಸ್‌ ನೌಕರರು ಪ್ರತಿಭಟನೆ

Published on

ಹಾಸನ: ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಆರೋಗ್ಯ ಇಲಾಖೆಯ ಎನ್‌ಎಚ್‌ಎಂ ಒಳ ಗುತ್ತಿಗೆದಾರರ ನೌಕರರನ್ನು ಕಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಹಿಮ್ಸ್‌ನಲ್ಲಿ ಕೆಲಸ ಮಾಡುವ ನೌಕರರು ಹಾಗೂ ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಮೌನ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಳಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಕೆ. ರಾಘವೇಂದ್ರ ಮಾತನಾಡಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 28,258 ನೌಕರರು ಎನ್‌ಎಚ್‌ಎಂ ಯೋಜನೆ ಅಡಿಯಲ್ಲಿ ಒಳಗುತ್ತಿಗೆ ನೌಕರರಾಗಿ ಕಳೆದ 20 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ನಮ್ಮ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷವು ಚುನಾವಣೆ ಪ್ರಣಾಳಿಕೆಯಲ್ಲಿ ಎನ್‌ಎಚ್‌ಎಮ್ ಒಳಗುತ್ತಿಗೆ ನೌಕರನ್ನು ಕಾಯಂ ಮಾಡುತ್ತೇವೆ ಎಂದು ಘೋಷಿಸಿತ್ತು. ಕಾಂಗ್ರೆಸ್ ಘೋಷಿಸಿದಂತೆ ನಮ್ಮನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ಬೇಡಿಕೆ ಈಡೇರಿಕೆಗಾಗಿ ಆರೋಗ್ಯ ಸಚಿವರು ಸಭೆ ನಡೆಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೌಕರರ ಕಾಯಂಗೆ ಕಡತ ಸಿದ್ಧಪಡಿಸಲು ಸೂಚಿಸಿದ್ದಾರೆ. ಅದರಂತೆ ಕಾಯಂ ಕಡತವು ರಚನೆಯಾಗಿ ಇಲಾಖೆಯ ಹಂತದಲ್ಲಿದೆ. ಸರ್ಕಾರದ ಗಮನ ಸೆಳೆಯಲು ರಾಜ್ಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರು ತಾವು ಕೆಲಸ ನಿರ್ವಹಿಸುವ ಸ್ಥಳದಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವುದರ ಜತೆಗೆ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಒಳಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳಾದ ಮಂಜುರಾಜು, ಡಾ.ನಾಹೀದ್, ಡಾ. ಹೇಮಂತ್, ಮಂಗಳ, ಡಾ. ಮಂಜುನಾಥ್, ದಿವ್ಯಾ ಇತರರು ಉಪಸ್ಥಿತರಿದ್ದರು.

ಹಾಸನ:
ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಆರೋಗ್ಯ ಇಲಾಖೆಯ ಎನ್‌ಎಚ್‌ಎಂ ಒಳ ಗುತ್ತಿಗೆದಾರರ ನೌಕರರನ್ನು ಕಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಹಿಮ್ಸ್‌ನಲ್ಲಿ ಕೆಲಸ ಮಾಡುವ ನೌಕರರು ಹಾಗೂ ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಮೌನ ಪ್ರತಿಭಟನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net