ಒಳಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ

mlc
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಚಾಲನೆ ನೀಡಿದರು.
Published on

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ  ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವರಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಮಾದರಿ ಕ್ಷೇತ್ರವಾಗಿಸುವ ನಮ್ಮ ಕನಸು ಖಂಡಿತ ಈಡೇರುತ್ತದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪಾವತಿ ನಾಯ್ಕರ್, ಸುರೇಶ ಇಟಗಿ, ನಿಂಗಪ್ಪ ತಳವಾರ, ಸಲೀಂ ಸತ್ತಿಗೇರಿ, ಸ್ವಾತಿ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ತಮ್ಮಣ್ಣ ಗಾಣಗಿ, ಅಶೋಕ ಬಾನಿಕಟ್ಟಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net