ಒಳಚರಂಡಿ ಸಮಸ್ಯೆ ಬಗ್ಗೆ ಪಾಲಿಕೆ ಸದಸ್ಯ ಪಟ್ಟು

WhatsApp Image 2024-06-27 at 7.05.11 PM
Published on

ಬಳ್ಳಾರಿ : ಮಹಾನಗರ ಪಾಲಿಕೆಯ 25ನೇ ವಾರ್ಡ್ ತಹಸೀಲ್ದಾರ್ ಕಾಂಪೌಂಡ್‌ನಲ್ಲಿನ ಒಳಚರಂಡಿ, ಕುಡಿವ ನೀರಿನ ಸಮಸ್ಯೆ ಪರಿಹರಿಸುವಂತೆ ಪಾಲಿಕೆ ಆಯುಕ್ತರಿಗೆ ವಾರ್ಡ್‌ ಸದಸ್ಯ ಎಂ.ಗೋವಿಂದರಾಜುಲು ಅವರೇ ಗುರುವಾರ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ.
ನಗರದ 25ನೇ ವಾರ್ಡ್‌ನ ತಹಸೀಲ್ದಾರ್ ಕಾಂಪೌಂಡ್ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಕುಡಿವ ನೀರು, ಒಳಚರಂಡಿ ಸಮಸ್ಯೆ ಉದ್ಭವಿಸಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಚಿಕ್ಕಮಕ್ಕಳು, ವೃದ್ಧರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆ ಇತ್ಯರ್ಥ ಪಡಿಸುವಂತೆ ಹಿಂದಿನ ಇಬ್ಬರು ಆಯುಕ್ತರಿಗೂ ಸಹ ಮನವಿ ಸಲ್ಲಿಸಿ ದೂರು ನೀಡಲಾಗಿತ್ತಾದರೂ, ಸಮಸ್ಯೆಯನ್ನು ಬಗೆಹರಿಸಲಿಲ್ಲ. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರೊಂದಿಗೆ ಖುದ್ಧು ನಾನೇ ಸರದಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಸ್ಥಳ ಭೇಟಿ ನೀಡಿ ತುರ್ತು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net