

ಚಿಕ್ಕಮಗಳೂರು: ಒಳಮೀಸಲಾತಿ ಜಾರಿಗೊಳಿಸದೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರುಗಳು ನಗರದ ಆಜಾದ್ ಪಾರ್ಕ್ ವೃತ್ತದದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬ್ಲೂ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಶೂದ್ರ ಶ್ರೀನಿವಾಸ್, ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ಸೂಚಿಸಿ ವರ್ಷ ಕಳೆದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುವ ಮೂಲಕ ಪರಿಶಿಷ್ಟರಿಗೆ ದ್ರೋಹವೆಸಗುತ್ತಿದೆ ಎಂದು ಆರೋಪಿಸಿದರು.
ಒಳಮೀಸಲಾತಿ ಸಂಬAಧ ನ್ಯಾಯಾಲಯ ತೀರ್ಪನ್ನು ಜಾರಿಗೊಳಿಸಲು ಅನಗತ್ಯವಾಗಿ ರಾಜ್ಯಸರ್ಕಾರ ವಿಳಂಬ ಮಾಡುತ್ತಿದೆ. ಇದರಿಂದ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾಣರವಾಗಿದೆ. ಜೊತೆಗೆ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಮತ್ತು ಮಹಿಳೆಯರು ನ್ಯಾಯಯುತ ಹಕ್ಕು ಗಳಿಂದ ವಂಚಿತರಾಗಿದ್ದಾರೆ ಎಂದರು.
ಸುಪ್ರೀA ಕೋರ್ಟ್ ತೀರ್ಪಿನಂತೆ ಹರಿಯಾಣ, ಆಂಧ್ರಪದೇಶ, ತೆಲಂಗಾಣ ಸರ್ಕಾರಗಳು ನಿಗಾವಹಿಸಿ ಆಯಾ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ತೋರಿವೆ. ಆದರೆ ಕರ್ನಾಟಕದಲ್ಲಿ ವಿಳಂಬ ನೀತಿ ಅನುಸರಿಸಿ ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು ಉಪಜಾತಿಗಳಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಮಾತನಾಡಿ, ಪರಿಶಿಷ್ಟರ ಶ್ರೇಯೋಭಿವೃದ್ದಿ ಸರ್ವೋಚ್ಛ ನ್ಯಾಯಾಲಯ ಒಳಮೀಸಲಾತಿ ಜಾರಿಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು. ಗಡುವಿನೊಳಗೆ ಬೇಡಿಕೆ ಈಡೇರಿಸಲು ವಿಫಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಒಳಮೀಸಲಾತಿ ಜಾರಿ ವಿಳಂಬ ತೋರಿದರೆ ಈ ತಿಂಗಳು ಆರಂಭವಾಗುವ ವಿಧಾನ ಮಂಡಲಗಳ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ನಿರ್ಲಕ್ಷÈದ ಬಗ್ಗೆ ಜನಾಕ್ರೋಶ ಉಗ್ರ ಸ್ವರೂಪದ ತಾಳಲಿದೆ ಎಂದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ, ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡು ರಾಜ್ಯದ ಕಾಂಗ್ರೆಸ್ ಸರ್ಕಾರ ನಾಟಕವಾಡುತ್ತಿದೆ. ಇದೀಗ ನ್ಯಾಯಾಲಯದ ತೀರ್ಪಿನ ಆದೇಶವನ್ನು ಪಾಲಿಸದೇ ಕಾಲಕಳೆದು ಪರಿಶಿಷ್ಟರ ಸೌಲಭ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಲಕ್ಷö್ಮಣ್, ರಮೇಶ್, ಮುಖಂಡರಾದ ಜಗದೀಶ್, ಸಗನಪ್ಪ, ರಮೇಶ್, ವೀರಭದ್ರಯ್ಯ, ಹರೀಶ್‌ಮಿತ್ರ, ಚಂದ್ರಶೇಖರ್, ನವೀನ್, ಸುಜೇಂದ್ರ, ಹಾಲಪ್ಪ, ದಿವಾಕರ್, ಎಚ್.ಕೆ.ಕೇಶವಮೂರ್ತಿ ಮತ್ತಿತರರಿದ್ದರು.