ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

HUN-JULY-7-1(ADIJAMBAVA MEMORENDUM)
Published on

ಹುಣಸೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ಆದಿ ಜಾಂಬವ ಸಂಘದ ಸದಸ್ಯರು ತಹಸೀಲ್ದಾರ್ ಜೆ.ಮಂಜುನಾಥ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಶಿವಣ್ಣ, 2011ರಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೀಡಿದ ವರದಿಯನ್ನು ಅಂದಿನ ಬಿಜೆಪಿ ಸರ್ಕಾರ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರಗಳೆರಡೂ ಕಡೆಗಣಿಸಿವೆ. ಬಹುಸಂಖ್ಯಾತ ಆದಿಜಾಂಬವ ಸಮುದಾಯಕ್ಕೆ ದೊಡ್ಡ ಅನ್ಯಾಯ ಮಾಡಿದಂತಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದ್ದಂತೆ ಸದಾಶಿವ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು. ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಗಜೀವನ ರಾಮ್ ಭವನ ನಿರ್ಮಿಸಬೇಕು. ತಿ.ನರಸೀಪುರ, ಹುಣಸೂರು ತಾಲೂಕಿನ ಆದಿಜಾಂಬವ ಜನಾಂಗದವರಿಗೆ ಸ್ಮಶಾನಕ್ಕೆ ಜಾಗ ಮೀಸಲಿಡಬೇಕು. ತಿ.ನರಸೀಪುರ ತಾಲೂಕು ಗೋಪಾಲಪುರ ಗ್ರಾಮದ ಮಾದಿಗ ಜನಾಂಗಕ್ಕೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಆದಿಜಾಂಬವ ಸಂಘದ ಗೌರವಾಧ್ಯಕ್ಷ ರಾಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಕುಮಾರ್, ಅಧ್ಯಕ್ಷ ಬಿ.ಶಿವಣ್ಣ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜ್ ಮಲ್ಲಾಡಿ, ರಾಯನಹಳ್ಳಿ ಸ್ವಾಮಿ, ಸಣ್ಣಮಾದಯ್ಯ, ಗ್ರಾಪಂ ಸದಸ್ಯ ಹರೀಶ್, ಆಂಜನೇಯ, ಮಾಜಿ ಸದಸ್ಯ ಮಹದೇವು, ಮಹಿಳಾ ಅಧ್ಯಕ್ಷೆ ಶಿವಮ್ಮ, ಪುರಸಭೆ ಮಾಜಿ ಸದಸ್ಯ ಎನ್.ನಾಗರಾಜು, ನಾಗಯ್ಯ, ಕುಮಾರ್, ಕಾಂತಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net