ಒಳಮೀಸಲಾತಿ ವರದಿ ತಿರಸ್ಕರಿಸುವಂತೆ ಆಗ್ರಹ

M.Shiva Naganna
Published on

ಚಾಮರಾಜನಗರ: ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯ ಒಳಮೀಸಲಾತಿ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವ ನಾಗಣ್ಣ ಒತ್ತಾಯಿಸಿದರು.

ರಾಜ್ಯ ಸರ್ಕಾರಕ್ಕೆ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸುವ ವರದಿ ಒಂದು ಸಮುದಾಯವನ್ನು ಓಲೈಸಲು ಮಾಡಿರುವಂತಹ ವರದಿಯಾಗಿದ್ದು, ಇದರಲ್ಲಿ ಬಲಗೈ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ವರದಿ ಅವೈಜ್ಞಾನಿಕ ವರದಿಯಾಗಿದ್ದು, ಹಲವಾರು ನ್ಯೂನ್ಯತೆಗಳಿಂದ ಕೂಡಿದೆ. ಆಗಾಗಿ ಸಾರಾಸಗಟಾಗಿ ಈ ವರದಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಈ ನಿಟ್ಟಿನಲ್ಲಿ ಆ.13ರಂದು ಜಿಲ್ಲಾ ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಪ್ರತಿಭಟನೆಯಲ್ಲಿ ಸಮುದಾಯದ ಕಟ್ಟೆ, ಗಡಿ ಯಜಮಾನರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಎಚ್.ಮಹದೇವಯ್ಯ, ಜಿಲ್ಲಾ ಉಪಾಧ್ಯಕ್ಷ ವಿ.ಕೃಷ್ಣರಾಜು, ಖಜಾಂಚಿ ಎ.ಶಿವಣ್ಣ, ಲಾವಣ್ಯ ಮಹೇಶ್, ನಟಶೇಖರ್‌ಮೂರ್ತಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net