ಒಳಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ

28 bannur 2
Published on

ಬನ್ನೂರು: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾದಿಗ ಜನಾಂಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ಬೆಂಗಳೂರಿಗೆ ಸಾಗುತ್ತಿರುವ ಪಾದಯಾತ್ರೆಯು ಪಟ್ಟಣಕ್ಕೆ ಆಗಮಿಸಿದ ವೇಳೆ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡು ಸಮುದಾಯದವರು ತಮಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಮಾಜದ ಕಟ್ಟಕಡೆಯ ಜನರನ್ನು ಮೂಲೆಗುಂಪು ಮಾಡುವ ಮೂಲಕ ನಮ್ಮನ್ನು ನಿರ್ಲಕ್ಷಿಸಿದ್ದಾರೆ. 35 ವರ್ಷದಿಂದ ಸರ್ಕಾರಗಳು ಒಳಮೀಸಲಾತಿ ಜಾರಿ ಮಾಡದೆ ಮೋಸ ಮಾಡುತ್ತಿವೆ. ಒಳ ಮೀಸಲಾತಿ ಜಾರಿ ಮಾಡದೆ ವಿವಿಧ ಹುದ್ದೆಗಳಿಗೆ ನೇಮಕ, ಬಡ್ತಿ ನೀಡಲಾಗುತ್ತಿದೆ. ಸರ್ಕಾರ ಒಳ ಮೀಸಲಾತಿ ಜಾರಿಗೆ ಕೂಡಲೇ ಮುಂದಾಗಬೇಕು ಎಂದು ಮನವಿ ಮಾಡಿದರು. ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net