ಒಳಮೀಸಲಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

IMG_20241202_130335
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6075926, 0.15858334);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;
Published on

ಚಾಮರಾಜನಗರ: ಅರಣ್ಯ ಆದಿವಾಸಿ ಮತ್ತು ಬುಡಕಟ್ಟು ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಮೂಲಕ ಸಾಗಿ ಶ್ರೀ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ ಸಿ.ಮಾದೇಗೌಡ ಮಾತನಾಡಿ, ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ಹುಲಿ ಯೋಜನೆ, ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಧಾಮ, ಬಂಡೀಪುರ ಹುಲಿ ಯೋಜನೆ ಹಾಗೂ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ 45,000 ಕ್ಕಿಂತಲೂ ಹೆಚ್ಚು ಆದಿವಾಸಿಗಳು ವಾಸವಾಗಿದ್ದಾರೆ. ಅನುಸೂಚಿತ ಪಂಗಡಗಳಿಗೆ ಹಲವಾರು ಹಿಂದುಳಿದ ಜಾತಿಗಳು ಸೇರ್ಪಡೆಯಾಗಿ ಶೇ.3 ರಷ್ಟು ಮೀಸಲಾತಿಯನ್ನು ಬಲಾಢ್ಯ ಜಾತಿಗಳು ಪಡೆದುಕೊಳ್ಳುತ್ತಿದೆ. ಇದರಿಂದ ಸೋಲಿಗ, ಬುಡಕಟ್ಟು ಸಮುದಾಯದವರು ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದರು.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ಅನುಸೂಚಿತ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಆಂತರಿಕ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿಯನ್ನು ನೀಡಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳಮೀಸಲಾತಿ ಸಂಬಂಧ ನ್ಯಾ.ಚಂದ್ರಚೂಡ ಆಯೋಗವನ್ನು ರಚಿಸಿ 3 ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿದೆ. ಆದರೇ 50 ಅನುಸೂಚಿತ ಪಂಗಡಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಯಾವುದೇ ಕ್ರಮವಹಿಸಿಲ್ಲ. ಇದರಿಂದ ಸುಮಾರು 12 ಅರಣ್ಯ ಆದಿವಾಸಿಗಳಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಅನುಸೂಚಿತ ಪಂಗಡಗಳಿಗೆ ಶೇ.3 ರಷ್ಟು ಒಳಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಅಧ್ಯಕ್ಷ ರಂಗೇಗೌಡ, ಆದಿವಾಸಿ ಸಮನ್ವಯ ಮಂಚ್ ಅಧ್ಯಕ್ಷ ವಿ.ಮುತ್ತಯ್ಯ, ರಾಜ್ಯ ಸೋಲಿಗರ ಅಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಜಡೇಸ್ವಾಮಿ, ಕೇತಮ್ಮ, ತಾಲೂಕು ಅಧ್ಯಕ್ಷರಾದ ದೊಡ್ಡ ಸಿದ್ದಯ್ಯ, ದಾಸೇಗೌಡ, ಸಿ.ಕೋಣುರೇಗೌಡ, ಮಾಧು, ರಂಗೇಗೌಡ, ಮಹಾದೇವ ಗೌಡ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net