ಒಳಿತಿಗಾಗಿ ಒಟ್ಟಾಗಿ ಶ್ರಮಿಸೋಣ

15 YERRISWAMY 04
Published on

ಬಳ್ಳಾರಿ : ಭವ್ಯ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಏಕತೆಯಿಂದ ಒಗ್ಗಟ್ಟಾಗಿ ದೇಶದ ಒಳಿತಿಗಾಗಿ ಶ್ರಮಿಸೋಣ ಎಂದು ಜಿಲ್ಲಾ ನ್ಯಾಯಾಧೀಶೆ ಕೆ.ಜಿ ಶಾಂತಿ ಕರೆ ನೀಡಿದರು.
ನಗರದ ಹೊಸ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ನೌಕರರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದೊಂದಿಗೆ ನಡೆದ 78 ನೇ ಸ್ವಾತಂತ್ರೊೃೀತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಸರ್ವೊತೋಮುಖ ಬೆಳವಣಿಗೆಗೆ ಚಿಂತನೆ ಮಾಡಿ, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ನಾನು ನನ್ನದು ಎನ್ನುವ ನಮ್ಮೊಳಗಿನ ಸ್ವಯಂ ವ್ಯಕ್ತಿತ್ವವನ್ನು ಹಿಮ್ಮೆಟ್ಟಿಸಿ, ಸುಭದ್ರ ದೇಶ ಕಟ್ಟುವಲ್ಲಿ ದಿಟ್ಟ ನಿರ್ಧಾದೊಂದಿಗೆ ದೇಶದ ಭದ್ರತೆಗಾಗಿ ಪಣ ತೊಡಬೇಕು. ದೇಶದ ರಕ್ಷಣೆ, ಭದ್ರತೆ ಮತ್ತು ಅಭಿವೃದ್ಧಿ ಪಥದತ್ತ ಸಾಗಿಸುವಲ್ಲಿ, ಕಾನೂನು, ರಾಜಕಾರಣಿ, ಅಧಿಕಾರಿಗಳಿಂದ ಮಾತ್ರವಲ್ಲದೆ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯೂ ಸಹ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಗ್ಗಟ್ಟಾಗಿ ದೇಶದ ಹಿತ ರಕ್ಷಣೆ ಕಾಪಾಡಬೇಕು ಎಂದರು. ಬಳಿಕ ಏಕ್ ಪೇಡ್ ಮಾ ಕೇ ನಾಮ್ ಅಭಿಯಾನದಡಿ ನ್ಯಾಯಾಲಯದ ಆವರಣದಲ್ಲಿ ಸಸಿ ನೆಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net