ಒವರ್‌ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ

8 gkp 01
ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಜಲ್‌ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಭೂಮಿಪೂಜೆ ನೆರವೇರಿಸಿದರು. ಚಕ್ಕೇರ ಸೂರ್ಯ ಅಯ್ಯಪ್ಪ, ಪಡಿಞರಂಡ ಕವಿತಾ ಪ್ರಭು, ಅಮ್ಮಯ್ಯ, ರಾಜು, ಮನಮೋಹನ್, ಮಾಪಂಗಡ ಯಮುನಾ ಚಂಗಪ್ಪ ಇದ್ದರು.
Published on

ಗೋಣಿಕೊಪ್ಪ: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಮಾಡು, ದಾಳಿಂಬೆ ಕೊಲ್ಲಿ ಹಾಡಿ, ಬೆಂಡೆಕುತ್ತಿ, ಕಟ್ಟೆಹಾಡಿ, ಹೊಸಕಾಲನಿ, ವಡ್ಡರಮಾಡು, ಕಟ್ಟೆಕಾಲನಿಗೆ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಒಟ್ಟು 77 ಲಕ್ಷ ರೂ. ಅನುದಾನದಲ್ಲಿ 2 ಒವರ್‌ಹೆಡ್ ಟ್ಯಾಂಕ್ ನಿರ್ಮಾಣ ಮತ್ತು ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆಯಲಿದೆ ಎಂದು ಕಾಟಿಮಾಡ ಶರೀನ್ ಮುತ್ತಣ್ಣ ತಿಳಿಸಿದರು. ಗ್ರಾ ಪಂ ಸದಸ್ಯರಾದ ಚಕ್ಕೇರ ಸೂರ್ಯ ಅಯ್ಯಪ್ಪ, ಪಡಿಞರಂಡ ಕವಿತಾ ಪ್ರಭು, ಅಮ್ಮಯ್ಯ, ರಾಜು, ಪಿಡಿಒ ಮನಮೋಹನ್, ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net