ಓದಿನ ಜತೆಗೆ ಕ್ರೀಡೆಯಲ್ಲೂ ಆಸಕ್ತಿ ಇರಲಿ

ydg08
Published on

ಸುರಪುರ: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಯಲ್ಲೂ ಭಾಗವಹಿಸುವ ಆಸಕ್ತಿ ಬೆಳೆಸಿಕೊಳ್ಳಬೆಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೇ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯ. ಹೀಗಾಗಿ ಓದಿನ ಜತೆಗೆ ಕ್ರೀಡೆಯಲ್ಲೂ ಭಾಗವಹಿಸಬೇಕು. ಕ್ರೀಡೆಯಿಂದ ಉತ್ತಮ ಆರೋಗ್ಯ, ಸದೃಢ ಮನಸ್ಸು ಮತ್ತು ಮಾನಸಿಕ ಸ್ಥೆÊರ್ಯ ಪ್ರಾಪ್ತಿಯಾಗಲಿದೆ ಎಂದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ಸೋಲು ಬಂದಾಗ ಎದೆಗುಂದದೆ ಸತತ ಪ್ರಯತ್ನ ಮಾಡಿ ಮುಂದಿನ ಪಂದ್ಯಗಳಲ್ಲಿ ಛಲದಿಂದ ಆಟವಾಡಿ ಗೆಲ್ಲಬೇಕು. ನಮ್ಮ ಸೋಲೆ ಗೆಲುವಿಗೆ ಮೆಟ್ಟಿಲನ್ನಾಗಿ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ, ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ಅಧ್ಯಕ್ಷ ಸಂಜೀವ್ ದರಬಾರಿ ಮಾತನಾಡಿದರು. ಯುತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ಮುಖಂಡರಾದ ರಾಜಾ ವಾಸುದೇವ ನಾಯಕ, ಮಲ್ಲಣ್ಣ ಸಾಹುಕಾರ ಮುಧೋಳ, ದೊಡ್ಡ ದೇಸಾಯಿ ದೇವರಗೋನಾಲ, ಪಿಎಸ್‌ಐ ಶಿವರಾಜ ಪಾಟೀಲ್, ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಡಮನಿ, ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ, ಬಿಆರ್‌ಪಿ ಖಾದರ್ ಪಟೇಲ್, ಗೋಪಾಲ ನಾಯಕ ಜಹಾಗೀರದಾರ್, ಶರಣಗೌಡ ಬಾನಾಳ, ಅಮರೇಶಗೌಡ ಇತರರಿದ್ದರು.


ಶಿಕ್ಷಕರಾದ ರಾಜ್‌ಅಹ್ಮದ್ ಪಥ ಸಂಚಲನ ನಡೆಸಿಕೊಟ್ಟರು. ಲಕ್ಷö್ಮಣ ಬಿರಾದಾರ ಮತ್ತು ಭೀಮರಾಯ ಗೋನಾಲ ನಿರೂಪಿಸಿದರು. ಗ್ರೇಡ್-೧ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಪಾಟೀಲ್ ಸ್ವಾಗತಿಸಿದರು. ಸಿದ್ದು ಅಮ್ಮಾಪುರ ವಂದಿಸಿದರು. ತಾಲೂಕಿನ ಏಳು ವಲಯಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net