ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ

27 HANUR 2
ಹನೂರಿನ ಜಿ.ವಿ. ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಉದ್ಘಾಟಿಸಿದರು. ಡಾ.ಎಸ್. ಶಿವರಾಜಪ್ಪ, ಚಂದ್ರಶೇಖರ್, ಶೈಲೇಶ್‌ಕುಮಾರ್ ಇತರರು ಇದ್ದರು.
Published on

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಹವ್ಯಾಸ ಬೆಳೆಸಿಕೊಂಡಾಗ ವ್ಯಕ್ತಿತ್ವ ವಿಕಸನದ ಜತೆಗೆ ಕನ್ನಡ ಸಾಹಿತ್ಯ ಶ್ರೀಮಂತಿಕೆ ಹೆಚ್ಚಾಗುತ್ತದೆ ಎಂದು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅಭಿಪ್ರಾಯಪಟ್ಟರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿ.ವಿ.ಗೌಡಕಾಲೇಜು ವತಿಯಿಂದ ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಘಟಕ ಹಾಗೂ ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರ ಬದುಕು - ಬರಹ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಚಾ.ನಗರ ಜಿಲ್ಲೆ ಸಾಹಿತ್ಯಿಕವಾಗಿ ಶ್ರೀಮಂತವಾಗಿದ್ದು, ಜನಪದ ಕಲೆಗಳ ತವರೂರಾಗಿದೆ. ಈ ಹಿಂದೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಬಳಿಕ ಭಾಷವಾರು ಪ್ರಾಂತ್ಯ ರಚಿಸಲಾಯಿತು. ತಮಿಳುನಾಡಿಗೆ ಹೊಂದಿಕೊಂಡಂತಿರುವ ಗಡಿ ಭಾಗದಲ್ಲಿ ಕನ್ನಡದ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ವೇದಿಕೆ ಕಲ್ಪಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಮೈಸೂರು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ ಮಾತನಾಡಿ, ಸಾಹಿತಿ ಡಾ.ಎಸ್.ಶಿವರಾಜಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಇವರ ಮಾರ್ಗದರ್ಶನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಎಚ್.ಡಿ ಮಹಾಪ್ರಬಂಧ ಮಂಡಿಸಿರುವುದು ಹೆಮ್ಮೆಯ ವಿಷಯ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಅಧ್ಯಕ್ಷ ಕಂದವೇಲು, ಜಿಲ್ಲಾಧ್ಯಕ್ಷ ಮಹೇಶ್ ಚಿಕ್ಕಲ್ಲೂರು ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಶಿವರಾಜಪ್ಪ, ಸಾಹಿತಿಗಳಾದ ಟಿ.ಸತೀಶ್ ಜವರೇಗೌಡ, ಡಿ.ಪಿ ಚಿಕ್ಕಣ್ಣ, ಪ್ರಾಂಶುಪಾಲ ಶೈಲೇಶ್ ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net