ಓಪಿಎಸ್ ಜಾರಿಗೆ ಆಗ್ರಹ

1906klb07
Published on

ಕಲಬುರಗಿ: ರಾಜ್ಯ ಸರ್ಕಾರಿ ನೌಕರರಿಗೆ ಬೆಲೆ ಏರಿಕೆಗೆಗೆ ಅನುಗುಣವಾಗಿ ಮನೆ ಬಾಡಿಗೆ, ಅಂಗವಿಕಲ ನೌಕರ, ಸಮವಸ್ತç ಭತ್ಯೆ ಸೇರಿ ಇತ್ಯಾದಿ ಭತ್ಯೆಗಳನ್ನು ಹೆಚ್ಚಿಸಬೇಕು, ಓಪಿಎಸ್ ಜಾರಿ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬುಧವಾರ ಸರ್ಕಾರಿ ನೌಕರರ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಸೇವಾ ಭದ್ರತೆ ಇಲ್ಲ, ಹೊರಗುತ್ತಿಗೆ ನೌಕರರ ಸಮಸ್ಯೆ ಪರಿಹರಿಸಿ, ಸೇವಾ ಭದ್ರತೆ ಒದಗಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಮಂಡಿಸಿದರು.
ಬೇಡಿಕೆಗಳ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಬಸವರಾಜ ಬಾಗೋಡಿ, ಪ್ರೇಮಾನಂದ ಚಿಂಚೋಳಿಕರ್, ಪ್ರಭು ಕಲಶೆಟ್ಟಿ, ಪ್ರಭು ಮಾಚನೂರ, ಸಾವಿತ್ರಾ ಉದಯಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net