ಓಮಿನಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Crime Logo
Published on

ಹಿರೇಕೆರೂರ: ಓಮಿನಿ ಕಾರು ಡಿಕ್ಕಿಯಾಗಿ ಬಟ್ಟೆ ತೊಳೆಯುವ ಸಲುವಾಗಿ ಕೆರೆ ಕಡೆಗೆ ಹೊರಟಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕುಂಚೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ದ್ಯಾಮವ್ವ ಚಂದ್ರಗೌಡ ಪಾಟೀಲ (45) ಮೃತ ಮಹಿಳೆ.

ಇವರು ಬಟ್ಟೆ ತೊಳೆಯುವ ಸಲುವಾಗಿ ಗ್ರಾಮದ ಸಣ್ಣಕೆರೆಗೆ ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಹಂಸಬಾವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net