ಔದ್ಯೋಗಿಕ ಕ್ಷೇತ್ರದತ್ತ ಹೆಚ್ಚುತ್ತಿದೆ ಮಹಿಳೆಯರ ಒಲವು

9blrp3
ಪುರಸಭೆ ವೇಲಾಪುರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸುನೀತಾ ಉದ್ಘಾಟಿಸಿದರು. ತೀರ್ಥಕುಮಾರಿ, ಸೌಮ್ಯ ಸುಬ್ರಹ್ಮಣ್ಯ, ಅಶ್ವಿನಿ, ಆಶಾ ಕಿರಣ್ ಇದ್ದರು.
Published on

ಬೇಲೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುನಿತಾ ಹೇಳಿದರು.
ಬೇಲೂರು ಪುರಸಭೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತಾಲೂಕಿನಲ್ಲಿ ಹಲವು ಇಲಾಖೆಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರಿದ್ದಾರೆ. ಮಹಿಳೆಯರು ಕರ್ತವ್ಯ ನಿರ್ವಹಿಸಲು ಯಾವುದೇ ತೊಂದರೆ ಆಗುತ್ತಿಲ್ಲ. ಮನೆಯಲ್ಲಿ ಮಹಿಳೆಯರನ್ನು ನಿಯಂತ್ರಣ ಮಾಡುವುದು ಸರಿಯಲ್ಲ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪುರಸಭೆ ಅಧ್ಯಕ್ಷ್ಷೆ ತೀರ್ಥಕುಮಾರಿ ಮಾತನಾಡಿ, ಇಂದು ಮಹಿಳೆಚಿುರು ಪುರುಷರಿಗಿಂತ ಏನೂ ಕಡಿಮೆ ಇಲ್ಲವೆಂಬಂತೆ ಎಲ್ಲ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡುತಿದ್ದಾರೆ. ಅವರಿಗೆ ಎಲ್ಲರ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಸಾಧನೆ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳೆಯರು ಮತ್ತಷ್ಟು ಉನ್ನತ ಹುದ್ದೆಗಳನ್ನು ಅಲಂಕರಿಸಿ ಇತರರಿಗೆ ಮಾದರಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭ ನಿವೃತ್ತ ಶಿಕ್ಷಕಿ ಜಮೀನಾ ಪರ್ವೀನ್ ಅವರನ್ನು ಸನ್ಮಾನಿಸಲಾಯಿತು. ಭಾರತಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷೆ ಸೌಭಾಗ್ಯ, ಪುರಸಭೆ ಸದಸ್ಯರಾದ ಸೌಮ್ಯ ಸುಬ್ರಹ್ಮಣ್ಯ, ಅಶ್ವಿನಿ, ಮಕ್ಕಳ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಆಶಾ ಕಿರಣ್, ಸಿಬ್ಬಂದಿ ಎ.ಎಂ.ಪ್ರತೀಕ್ಷಾ, ಶಶಿಕಲಾ, ಜ್ಯೋತಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net