

ಔರಾದ್: ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನ ತಡೆದ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ವಾಗ್ವಾದ, ಹಲ್ಲೆ ನಡೆದ ಘಟನೆ ಸೋಮವಾರ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಬೀದರ್ ತಾಲೂಕಿನ ಮನ್ನಳಿಯ ದನದ ವ್ಯಾಪಾರಿ ಅಬ್ದೂಲ್ ಸಲೀಂ ಔರಾದ್ ಠಾಣೆಯಲ್ಲಿ ಅನೀಲ ದೇವಕತ್ತೆ ಸೇರಿದಂತೆ ಎಂಟು ಮಂದಿ ವಿರುದ್ಧ ಹಲ್ಲೆ ನಿಂದನೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಸವರಾಜ್ ಚೌಕಂಪಲ್ಲಿ ಅನ್ನುವವರು ಮುಜೀಮ್ ಸೇರಿ ಆರು ಮಂದಿ ವಿರುದ್ದ ಹಲ್ಲೆ ನಿಂದನೆ ದೂರು ಧಾಖಲಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭಾಲ್ಕಿ ವಿಭಾಗದ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್, ಪಿಎಸ್ ಐ ಉಪೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.