

ಔರಾದ್: ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮತ್ತು ಕಮಲನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಪೌರಾಡಳಿತ ಸಚಿವ ರಹೀಮ್ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಔರಾದ್ ತಾಲೂಕು ಡಾ.ನಂಜುAಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಪ್ರಸ್ತುತ ಔರಾದ್ ಪಟ್ಟಣ ಪಂಚಾಯಿತಿ ಕೇಂದ್ರ ಸ್ಥಾನವಾಗಿದೆ. ಪಟ್ಟಣದ ವ್ಯಾಪ್ತಿಗೆ ಹಲವು ಗ್ರಾಮ ಹೊಂದಿಕೊAಡಿವೆ. ಈ ಗ್ರಾಮಗಳ ಜನಸಂಖ್ಯೆ ಪರಿಗಣಿಸಿದರೆ ಪಟ್ಟಣ ಪಂಚಾಯಿತಿ ಕೇಂದ್ರ ಸ್ಥಾನವನ್ನು ಪುರಸಭೆಯ ಕೇಂದ್ರ ಸ್ಥಾನವನ್ನಾಗಿ ಮೇಲ್ದರ್ಜೆಗೆ ಏರಿಸಬಹುದು ಎಂದು ಮನವರಿಕೆ ಮಾಡಿದ್ದಾರೆ.
ಈ ಬಗ್ಗೆ ಕಳೆದ ಸರ್ಕಾರದ ಅವಧಿಯಲ್ಲಿ ನಾನು ಮನವಿ ಸಲ್ಲಿಸಿದ್ದು, ಪ್ರಸ್ತುತ ಪ್ರಸ್ತಾವನೆ ಕಡತ ಪೌರಾಡಳಿತ ಇಲಾಖೆಯಲ್ಲಿ ಬಾಕಿ ಇದ್ದು, ಕೂಡಲೇ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ವಹಿಸಬೇಕು ಎಂದು ಕೋರಿದ್ದಾರೆ.
ಕಮಲನಗರವನ್ನು ಹೊಸದಾಗಿ ತಾಲೂಕು ಕೇಂದ್ರವನ್ನಾಗಿ ಘೋಷಿಸಿದ್ದು, ಈ ಪಂಚಾಯಿತಿಯ ವ್ಯಾಪ್ತಿಯಲ್ಲಿ ೧೫ ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಕಮಲನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಬೀದರ್ ಜಿ¯್ಲÁಧಿಕಾರಿ ಅವರ ಮೂಲಕ ಪೌರಾಡಳಿತ ಇಲಾಖೆಯಿಂದ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿದೆ. ಮುತುವರ್ಜಿ ವಹಿಸಿ ಪಟ್ಟಣ ಪಂಚಾಯಿತಿ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.