ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಿಂದ ವಿವಿಧ ಸ್ನಾತಕ, ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಏ.7ರ ಬದಲು ಏ.16ರಿಂದ ನಡೆಸಲಾಗುವುದು.
ಸೆಮಿಸ್ಟರ್, ವಾರ್ಷಿಕ ಪರೀಕ್ಷೆಗಳನ್ನು ಏ.7ರಿಂದ ನಡೆಸುವ ಬಗ್ಗೆ ವೇಳಾಪಟ್ಟಿಯನ್ನು ನಿಗದಿಪಡಿಸಿ ಈಗಾಗಲೇ ವಿಶ್ವವಿದ್ಯಾನಿಲಯದ ಅಧಿಕೃತ ಅಂತರ್‌ಜಾಲದಲ್ಲಿ ಪ್ರಕಟಿಸಲಾಗಿತ್ತು. ಆದರೆ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ಕಾರ್ಯಕ್ರಮಗಳು ಮುಗಿಯದ ಕಾರಣ ಪರೀಕ್ಷೆಗಳನ್ನು ಏಪ್ರಿಲ್ 16 ರಿಂದ ರಾಜ್ಯಾದ್ಯಂತ ನಿಗಧಿಪಡಿಸಿ ಪರೀಕ್ಷೆ ನಡೆಸಲಾಗುವುದು. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲಿ ವಿಶ್ವವಿದ್ಯಾನಿಲಯದ ಅಧಿಕೃತ ಅಂತರ್‌ಜಾಲದಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.