

ನಾಪೋಕ್ಲು: ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಭಾನುವಾರ ಕೈಲು ಮುಹೂರ್ತ ಪ್ರಯುಕ್ತ ಜನಾಂಗದವರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಮೈಸೂರಿನ ವಿಶ್ವವಿದ್ಯಾಲಯ ಕ್ರೀಡಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಉದ್ಘಾಟಿಸಿದರು.
ನಂತರ ನಡೆದ ಕ್ರೀಡಾಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಕ್ರೀಡಾ ಸಂಚಾಲಕ ಕೊಂಬಾರಾನ ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಸಮಾಜದ ಪದಾಧಿಕಾರಿಗಳು ಇದ್ದರು.
ಸೆಪ್ಟೆಂಬರ್ 7ರಂದು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸೆ.8ರಂದು ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಸಮಾರೋಪ ಸಮಾರಂಭ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.