ಕಂಕಣ ತೊಟ್ಟು ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಸಂಕಲ್ಪ

bkt-6-6
ಬಾಗಲಕೋಟೆ ನಗರದಲ್ಲಿ ಶಾಸಕ ವೀರಣ್ಣ ಚರಂತಿಮಠ ಮನೆ ಎದುರು ಬಿಜೆಪಿ ಕಾರ್ಯಕರ್ತರು ಕಂಕಣ ಕಟ್ಟಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಸಂಕಲ್ಪ ಮಾಡಿದರು.
Published on

ಬಾಗಲಕೋಟೆ: ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್‌ಕೆ ಆಸ್ಪತ್ರೆ ಆವರಣದಲ್ಲಿರುವ ಶಾಸಕ ವೀರಣ್ಣ ಚರಂತಿಮಠ ಮನೆ ಎದುರು ಕಮಲದ ರಂಗೋಲಿ ಬಿಡಿಸಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿ ಬಿಜೆಪಿ ಕಾರ್ಯಕರ್ತರಿಗೆ ವಿಜಯ ಸಂಕಲ್ಪವಾದ ಕಂಕಣವನ್ನು ಶಾಸಕರು ಕಟ್ಟಿದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಕಲ್ಪ ಮಾಡಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಅಟಲ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಮಹಾನ್ ನಾಯಕರ ತ್ಯಾಗದಿಂದ ಪಕ್ಷ ದೇಶದಲ್ಲಿ ಬಲಿಷ್ಠವಾಗಿದೆ. ಅವರ ಸಂಘಟನೆ ಸ್ಮರಣೀಯವಾಗಿತ್ತು. ಸಹಸ್ರಾರು ಕಾರ್ಯಕರ್ತರ ತ್ಯಾಗ, ಬಲಿದಾನಗಳ ಪ್ರತಿಕವಾಗಿ ಸೈದ್ದಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ ಪಕ್ಷವಾಗಿದ್ದು, ಈ ದಿನವನ್ನು ಸಂಭ್ರಮದಿಂದ ಆಚರಿಸೋಣ, ವಿಜಯದ ಸಂಕಲ್ಪ ಮಾಡೋಣ ಎಂದರು.

ಮಾಜಿ ಪ್ರಧಾನ ಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿಯವರು ನನಸು ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ಹೆಜ್ಜೆಯನ್ನು ಹಾಕುತ್ತಿರುವುದು ಹೆಮ್ಮೆಯ ವಿಷÀಯವಾಗಿದೆ ಎಂದು ಹೇಳಿದರು.

ವಿಧಾನ ಪರಿಷÀತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಮುಖಂಡರಾದ ಅಶೋಕ ಲಿಂಬಾವಳಿ, ರಾಜು ರೇವಣಕರ, ರಾಜು ನಾಯ್ಕರ, ಸದಾನಂದ ನಾರಾ, ಬಸವರಾಜ ಯಂಕಂಚಿ, ಪ್ರಭು ಹಡಗಲಿ, ಬಸವರಾಜು ಹುನಗುಂದ, ಉಮೇಶ ಹಂಚಿನಾಳ ಸೇರಿದಂತೆ ಇತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net