ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ

dccccccccccc
Published on

ಚಿತ್ರದುರ್ಗ:ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಮಂಗಳವಾರ ಚಳ್ಳಕೆರೆ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ತಾಲೂಕು ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ವಿನಾ ಕಾರಣ ಸಾರ್ವಜನಿಕರ ಅರ್ಜಿಗಳ ವಿಲೇವಾರಿಯನ್ನು ವಿಳಂಬ ಮಾಡಬಾರದು. ಸಕಾಲದ ಕಾಲಮಿತಿಯಲ್ಲಿಯೇ ಸಾರ್ವಜನಿಕರಿಗೆ ಸೇವೆ ನೀಡಬೇಕೆಂದು ಸೂಚಿಸಿದರು. ತಹಸೀಲ್ದಾರ್ ರಹೆಮಾನ್‌ಪಾಷಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net