ಕರೆಕಟ್ಟೆಗಳಿಂದ ಅಂತರ್ಜಲ ಮಟ್ಟ ವೃದ್ಧಿ

chn may june 05 kengapura.
Published on

ಚನ್ನಗಿರಿ: ಕರೆಕಟ್ಟೆಗಳು ತುಂಬಿದರೆ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಇದರಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಜಬೀವುಲ್ಲಾ ಹೇಳಿದರು.

ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕೆರೆ ಪುನಶ್ಚೇತನಗೊಳಿಸಲಾದ 722 ನೇ ಕೆರೆ ಹಸ್ತಾಂತರ ಹಾಗೂ ಕೆರೆ ನಾಮಫಲಕ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ. ವೀರೇಂದ್ರ ಹೆಗ್ಗಡೆ ಅವರು ವಿಶೇಷ ಆಸಕ್ತಿವಹಿಸಿ ಸಿಬ್ಬಂದಿ ಮೂಲಕ ರಾಜ್ಯದ ಎಲ್ಲ ಗ್ರಾಮಗಳ ಕೆರೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಸಂಸ್ಥೆಯು ಕೆರೆಯನ್ನು ಪುನಶ್ಚೇತನಗೊಳಿಸಿ ಗ್ರಾಮಸ್ಥರ ಕೈಗೆ ನೀಡುತ್ತದೆ, ಅದನ್ನು ಉಳಿಸಿಕೊಂಡು ಹೋಗಬೇಕು ಎಂದರು.

ಧಗ್ರಾಯೋ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಬಿ. ಗೀತಾ ಮಾತನಾಡಿ, ಪುನಶ್ಚೇತನಗೊಂಡ ಕೆರೆಯನ್ನು ಗ್ರಾಮದ ಜನರಿಗೆ ಹಸ್ತಾಂತರಿಸಲಾಗುತ್ತದೆ. ಗ್ರಾಮಸ್ಥರು ಕೆರೆಯಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ಬೀಳದಂತೆ ನಿರ್ವಹಣೆ ಮಾಡಬೇಕು ಎಂದರು.

2016 ರಿಂದ ರಾಜ್ಯದಲ್ಲಿ ಶ್ರೀಕ್ಷೇತ್ರದ ವತಿಯಿಂದ ಕೆರೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಾ ಬಂದಿದೆ. ಕೆಂಗಾಪುರ ಗ್ರಾಮದಲ್ಲಿ 200 ವರ್ಷ ಇತಿಹಾಸವುಳ್ಳ ಕೆರೆಯನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗಿದೆ ಎಂದು ತಿಳಿಸಿದರು.

ಧಗ್ರಾಯೋ ಜಿಲ್ಲಾ ನಿರ್ದೇಶಕ ಕಮಲಾಕ್ಷ, ಯೋಜನಾಧಿಕಾರಿ ರೂಪಾ, ಕೆರೆಸಮಿತಿ ಅಧ್ಯಕ್ಷ ಗಣೇಶ್​ನಾಯ್ಕ, ಸಿದ್ದಲಿಂಗಪ್ಪ, ಪಿಡಿಒ ಮಂಜಪ್ಪ, ನಾಗರಾಜ್ ನಾಯ್ಕ, ಸ್ವಸಹಾಯ ಸಂಘದ ಅಧ್ಯಕ್ಷ ಭಾಗ್ಯ, ಜನಜಾಗೃತಿ ಸದಸ್ಯ ಮಹೇಶ್ವರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net